×
Ad

ವಿಧಾನಸಭೆಯಲ್ಲಿ ಮಾಧ್ಯಮ ನಿರ್ಬಂಧ ಸರಿಯಲ್ಲ: ಪರಿಷತ್‌ನ ಕಾಂಗ್ರೆಸ್ ಸದಸ್ಯ ಪ್ರಕಾಶ್ ರಾಥೋಡ್

Update: 2019-10-11 23:06 IST

ಬೆಂಗಳೂರು, ಅ.11: ವಿಧಾನಸಭೆಯಲ್ಲಿ ವಿದ್ಯುನ್ಮಾನ ಮಾಧ್ಯಮಗಳಿಗೆ ನಿರ್ಬಂಧ ಹೇರಿರುವುದು ಸರಿಯಲ್ಲ. ಇದನ್ನು ಮರು ಪರಿಶೀಲಿಸಬೇಕೆಂದು ವಿಧಾನ ಪರಿಷತ್‌ನ ಕಾಂಗ್ರೆಸ್ ಸದಸ್ಯ ಪ್ರಕಾಶ್ ರಾಥೋಡ್ ಅಭಿಪ್ರಾಯಿಸಿದ್ದಾರೆ.

ಶುಕ್ರವಾರ ವಿಧಾನಪರಿಷತ್‌ನ ಕಲಾಪ ಆರಂಭವಾಗುತ್ತಿದ್ದಂತೆ, ಪರಿಷತ್‌ನಲ್ಲಿ ಮಾಧ್ಯಮಗಳಿಗೆ ಯಾವುದೇ ನಿರ್ಬಂಧ ವಿಧಿಸದಿರುವುದು ಸಂತಸದ ಸಂಗತಿ. ಅದೇ ರೀತಿಯ ವಿಧಾನಸಭೆಯಲ್ಲೂ ಮಾಧ್ಯಮಗಳಿಗೆ ನಿರ್ಬಂಧ ಹೇರಬಾರದು. ಇದು ಪತ್ರಿಕಾ ಸ್ವಾತಂತ್ರಕ್ಕೆ ಧಕ್ಕೆ ತುರುವಂತಹದ್ದಾಗಿದೆ ಎಂದರು.

ಈ ವೇಳೆ ಮಧ್ಯೆ ಪ್ರವೇಶಿಸಿದ ಸಭಾನಾಯಕ ಕೆಳಮನೆಯ ಸಭಾಧ್ಯಕ್ಷರ ನಿರ್ಧಾರವನ್ನು ಇಲ್ಲಿ ಪ್ರಶ್ನಿಸುವಂತಿಲ್ಲ. ಹೀಗಾಗಿ ಈ ವಿಷಯವನ್ನು ಪ್ರಸ್ತಾಪಿಸಬಾರದು ಎಂದರು. ಇದಕ್ಕೆ ಪ್ರತಿಕ್ರಿಯಿಸಿದ ವಿಪಕ್ಷ ನಾಯಕ ಎಸ್.ಆರ್.ಪಾಟೀಲ್, ರಾಥೋಡ್ ಹೇಳಿರುವುದರಲ್ಲಿ ತಪ್ಪಿಲ್ಲ. ಅವರ ಅಭಿಪ್ರಾಯವನ್ನು ಹೇಳುವ ಹಕ್ಕಿದೆ ಎಂದರು.

ಇದಕ್ಕೆ ಧ್ವನಿಗೂಡಿಸಿದ ಜೆಡಿಎಸ್ ಬಸವರಾಜ ಹೊರಟ್ಟಿ, ಪ್ರಕಾಶ್ ರಾಥೋಡ್ ಸುದುದ್ದೇಶದಿಂದಲೇ ಹೇಳಿದ್ದಾರೆ. ಹಿಂದೆ ಸಭಾಧ್ಯಕ್ಷರೊಬ್ಬರು ಮೇಲ್ಮನೆಯನ್ನೇ ರದ್ದು ಮಾಡಿ ಎಂದು ಕೆಳಮನೆಯಲ್ಲಿ ಹೇಳಿದ್ದನ್ನು ಪ್ರಸ್ತಾಪಿಸಿ, ಅಭಿಪ್ರಾಯ ವ್ಯಕ್ತಪಡಿಸಲು ಯಾವ ಅಡ್ಡಿಯೂ ಇಲ್ಲವೆಂದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News