×
Ad

ವರ್ತಿಕಾ ಕಟಿಯಾರ್ 2020ರವರೆಗೆ ಈಗಿರುವ ಸ್ಥಳದಲ್ಲೇ ಮುಂದುವರಿಯಲಿ: ಸಿಎಟಿ

Update: 2019-10-11 23:44 IST
ವರ್ತಿಕಾ ಕಟಿಯಾರ್

ಬೆಂಗಳೂರು, ಅ.11: ಧಾರವಾಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವರ್ತಿಕಾ ಕಟಿಯಾರ್ ಅವರನ್ನು 2020ರ ಮಾರ್ಚ್ ಅಂತ್ಯದವರೆಗೆ ಈಗಿರುವ ಸ್ಥಳದಲ್ಲೇ ಮುಂದುವರಿಸಿ ಎಂದು ರಾಜ್ಯ ಸರಕಾರಕ್ಕೆ ಕೇಂದ್ರ ಆಡಳಿತ ನ್ಯಾಯಮಂಡಳಿ(ಸಿಎಟಿ) ಆದೇಶಿಸಿದೆ.

ವರ್ಗಾವಣೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನ್ಯಾಯಾಂಗ ಸದಸ್ಯ ಕೆ.ಬಿ.ಸುರೇಶ್ ಅವರಿದ್ದ ಪೀಠದಲ್ಲಿ ನಡೆಯಿತು. ಶೈಕ್ಷಣಿಕ ವರ್ಷದ ಮಧ್ಯಭಾಗದಲ್ಲಿ ವರ್ಗಾವಣೆ ಮಾಡಿರುವುದು ಸೂಕ್ತವಲ್ಲ. ಇದರಿಂದ, ಅವರ ಮಕ್ಕಳ ವಿದ್ಯಾಭ್ಯಾಸಕ್ಕೆ ತೊಂದರೆಯಾಗಲಿದೆ. ಪ್ರಸಕ್ತ ಶೈಕ್ಷಣಿಕ ವರ್ಷದ ಅಂತ್ಯದವರೆಗೆ ಅರ್ಜಿದಾರರನ್ನು ಹಾಲಿ ಹುದ್ದೆಯಲ್ಲಿಯೇ ಮುಂದುವರಿಸಿ ಎಂದು ರಾಜ್ಯ ಸರಕಾರಕ್ಕೆ ನಿರ್ದೇಶಿಸಿದ ನ್ಯಾಯಪೀಠವು ಅರ್ಜಿಯನ್ನು ವಿಲೇವಾರಿ ಮಾಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News