ನ್ಯೂಯಾರ್ಕ್ ಕ್ಲಬ್ ನಲ್ಲಿ ಗುಂಡಿನ ದಾಳಿ: ನಾಲ್ವರು ಮೃತ್ಯು

Update: 2019-10-12 13:15 GMT

ನ್ಯೂಯಾರ್ಕ್, ಅ.12: ಇಲ್ಲಿನ ಕ್ಲಬ್ ಒಂದರಲ್ಲಿ ನಡೆದ ಗುಂಡಿನ ದಾಳಿಯಲ್ಲಿ ನಾಲ್ವರು ಮೃತಪಟ್ಟು, ಮೂರು ಜನರು ಗಾಯಗೊಂಡ ಘಟನೆ ಶನಿವಾರ ನಡೆದಿದೆ.

ಇಲ್ಲಿನ ಬ್ರೂಕ್ಲಿನ್ ನಲ್ಲಿ ಘಟನೆ ನಡೆದಿದ್ದು, ಇದಕ್ಕೆ ಸಂಬಂಧಿಸಿ ಯಾರೊಬ್ಬರನ್ನೂ ಬಂಧಿಸಿಲ್ಲ. ಗುಂಡಿನ ದಾಳಿಯಿಂದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ನ್ಯೂಯಾರ್ಕ್ ಪೊಲೀಸರು ಮಾಹಿತಿ ನೀಡಿದ್ದಾಗಿ ವರದಿಯಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News