ಅ.16-17: ಉಡುಪಿ ಜಿಲ್ಲಾ ಪಿಯುಸಿ ವಿದ್ಯಾರ್ಥಿಗಳ ಕ್ರೀಡಾಕೂಟ

Update: 2019-10-12 13:18 GMT

ಕುಂದಾಪುರ, ಅ.12: ಉಡುಪಿ ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ಕೋಡಿ ಹಾಜಿ ಕೆ.ಮೊಹಿದ್ದೀನ್ ಬ್ಯಾರಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಜಂಟಿ ಆಶ್ರಯದಲ್ಲಿ ಉಡುಪಿ ಜಿಲ್ಲಾ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ಜಿಲ್ಲಾಮಟ್ಟದ ಕ್ರೀಡಾಕೂಟ ಸೌಹಾರ್ದ-2019 ಅ.16 ಮತ್ತು 17ರಂದು ಕುಂದಾಪುರ ಗಾಂಧಿ ಮೈದಾನದಲ್ಲಿ ನಡೆಯಲಿದೆ.

ಕ್ರೀಡಾಕೂಟವನ್ನು ಅ.16ರಂದು ಬೆಳಗ್ಗೆ 9:45ಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ಉದ್ಘಾಟಿಸಲಿರುವರು. ಸಚಿವ ಕೋಟ ಶ್ರೀನಿವಾಸ ಪೂಜಾರಿ ಜ್ಯೋತಿ ಬೆಳಗಿಸಲಿರುವರು. ಅಧ್ಯಕ್ಷತೆಯನ್ನು ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ವಹಿಸಲಿರುವರು. ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ಸೈಯದ್ ಮೊಹಮ್ಮದ್ ಬ್ಯಾರಿ ಧ್ವಜಾರೋಹಣ ನೆರವೇರಿಸಲಿರು ವರು. ವಿಧಾನ ಪರಿಷತ್ ಸಭಾಪತಿ ಪ್ರತಾಪ್‌ಚಂದ್ರ ಶೆಟ್ಟಿ ವಂದನೆ ಸ್ವೀಕರಿಸ ಲಿರುವರು.

ಅ.17ರಂದು ಸಂಜೆ 3:30ಕ್ಕೆ ನಡೆಯುವ ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ವಹಿಸಲಿರುವರು. ಉದ್ಯಮಿ ಆನಂದ ಸಿ.ಕುಂದರ್, ಮಾಜಿ ಶಾಸಕ ಗೋಪಾಲ ಪೂಜಾರಿ ಮೊದಲಾದವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿರುವರು ಎಂದು ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News