70 ಪ್ರಾಂಶುಪಾಲರಿಗೆ ಶೋಕಾಸ್ ನೋಟಿಸ್

Update: 2019-10-12 14:26 GMT

ಬೆಂಗಳೂರು, ಅ.12: ಪ್ರವೇಶ ಪಡೆದ ವಿದ್ಯಾರ್ಥಿಗಳ ಅಂಕಿ-ಅಂಶಗಳನ್ನು ಅಪ್‌ಲೋಡ್ ಮಾಡದ ಹಿನ್ನೆಲೆಯಲ್ಲಿ ಸರಕಾರಿ ಪ್ರಥಮ ದರ್ಜೆ ಕಾಲೇಜುಗಳ 70 ಪ್ರಾಂಶುಪಾಲರಿಗೆ ಕಾಲೇಜು ಶಿಕ್ಷಣ ಇಲಾಖೆ ಶೋಕಾಸ್ ನೋಟಿಸ್ ನೀಡಿದೆ.

ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ 2019-20ನೆ ಸಾಲಿಗೆ ಮ್ಯಾನ್ಯುಯಲ್ ವಿಧಾನದ ಮೂಲಕ ಪ್ರಥಮ ವರ್ಷದ ಪದವಿಗೆ ಪ್ರವೇಶ ಪಡೆದಿರುವ ವಿದ್ಯಾರ್ಥಿಗಳ ಮಾಹಿತಿಯನ್ನು ಆನ್‌ಲೈನ್ ಅಡ್ಮಿಷನ್ ಪೋರ್ಟಲ್‌ಗೆ ಅಪ್‌ಲೋಡ್ ಮಾಡದ 70 ಪ್ರಾಂಶುಪಾಲರಿಗೆ ಕಾರಣ ಕೇಳಿ ನೋಟಿಸ್ ನೀಡಿದೆ.

ಸುತ್ತೋಲೆಗಳಲ್ಲಿ ಕೋರಿರುವ ಮಾಹಿತಿ ಅಪ್‌ಲೋಡ್ ಮಾಡದಿದ್ದಲ್ಲಿ ಮುಂದಿನ ಪರಿಣಾಮಗಳಿಗೆ ಹೊಣೆಗಾರರನ್ನಾಗಿ ಮಾಡಲಾಗುವುದು ಎಂಬ ಎಚ್ಚರಿಕೆಯನ್ನು ನೀಡಿದ್ದರೂ, ನಿರ್ಲಕ್ಷದಿಂದ ಕರ್ತವ್ಯ ಲೋಪ ಎಸಗಿದ್ದೀರಿ. ನೋಟಿಸ್ ತಲುಪಿದ ಮೂರು ದಿನಗಳಲ್ಲಿ ವಿವರಣೆ ಸಲ್ಲಿಸಬೇಕು. ಇಲ್ಲದಿದ್ದರೆ ಏಕಪಕ್ಷೀಯವಾಗಿ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಕಾಲೇಜು ಶಿಕ್ಷಣ ಇಲಾಖೆಯ ನಿರ್ದೇಶಕರು ಎಚ್ಚರಿಕೆ ನೀಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News