‘ಧನವಿನಿಯೋಗ ವಿಧೇಯಕ’ಕ್ಕೆ ಉಭಯ ಸದನಗಳಲ್ಲಿ ಅನುಮೋದನೆ

Update: 2019-10-12 14:27 GMT

ಬೆಂಗಳೂರು, ಅ. 12: 2019-20ನೆ ಸಾಲಿನ ಪೂರ್ಣ ಪ್ರಮಾಣದ 2.40 ಲಕ್ಷ ಕೋಟಿ ರೂಪಾಯಿಗಳ ‘ಕರ್ನಾಟಕ ಧನವಿನಿಯೋಗ ವಿಧೇಯಕ-2019’ಕ್ಕೆ ವಿಧಾನ ಮಂಡಲ ಉಭಯ ಸದನಗಳಲ್ಲಿ ಶನಿವಾರ ಸರ್ವಾನುಮತದಿಂದ ಅಂಗೀಕಾರ ನೀಡಲಾಯಿತು.

ಶನಿವಾರ ಕಲಾಪ ಆರಂಭಗೊಳ್ಳುತ್ತಿದ್ದಂತೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ವಿತ್ತೀಯ ಕಾರ್ಯ ಕಲಾಪಗಳನ್ನು ಕೈಗೆತ್ತಿಕೊಂಡರು. ಆ ಬಳಿಕ ಸ್ಪೀಕರ್ ಸೂಚನೆ ಹಿನ್ನೆಲೆಯಲ್ಲಿ ವಿತ್ತೀಯ ಮಸೂದೆಗೆ ಅನುಮೋದನೆ ನೀಡಬೇಕೆಂದು ಮುಖ್ಯಮಂತ್ರಿ ಯಡಿಯೂರಪ್ಪ ಮನವಿ ಮಾಡಿದರು.

ಅನುದಾನದ ಬೇಡಿಕೆ ಚರ್ಚೆಯಲ್ಲಿ ಮಾತನಾಡಿದ ಸಿಎಂ ಯಡಿಯೂರಪ್ಪ, ಹಿಂದಿನ ಸರಕಾರದ ಎಲ್ಲ ಜನಪ್ರಿಯ ಯೋಜನೆಗಳನ್ನು ಕಡಿತ ಮಾಡದೆ ಮುಂದುವರಿಸಲಾಗುವುದು. ಅಭಿವೃದ್ಧಿ ವಿಚಾರದಲ್ಲಿ ಶಾಸಕರ ಕ್ಷೇತ್ರಗಳಿಗೆ ಹಣಕಾಸು ಮಂಜೂರಾತಿಯಲ್ಲಿ ತಾರತಮ್ಯವಾಗಿದ್ದರೆ ಅದನ್ನು ಸರಿಪಡಿಸುವುದಾಗಿ ಭರವಸೆ ನೀಡಿದರು.

ಜಿಎಸ್ಟಿ ತಿದ್ದುಪಡಿ ವಿಧೇಯಕಕ್ಕೆ ಅಸ್ತು: ಕರ್ನಾಟಕ ಸರಕು ಮತ್ತು ಸೇವೆಗಳ ತೆರಿಗೆ(ತಿದ್ದುಪಡಿ) ವಿಧೇಯಕಕ್ಕೆ ವಿಧಾನ ಮಂಡಲ ಉಭಯ ಸದನಗಳಲ್ಲಿ ಧ್ವನಿಮತದ ಮೂಲಕ ಅನುಮೋದನೆ ನೀಡಲಾಯಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News