ಅತಿಥಿ ಉಪನ್ಯಾಸಕರ ಗೌರವಧನ ಹೆಚ್ಚಿಸಿ: ಜೆಡಿಎಸ್ ಮುಖಂಡ ಮರಿತಿಬ್ಬೇಗೌಡ ಒತ್ತಾಯ

Update: 2019-10-12 16:03 GMT

ಬೆಂಗಳೂರು, ಅ.12: ಕಳೆದ ಹಲವು ತಿಂಗಳಿನಿಂದ ಬಾಕಿ ಉಳಿಸಿಕೊಂಡಿರುವ ಅತಿಥಿ ಉಪನ್ಯಾಸಕರ ಗೌರವಧನ ನೀಡುವುದು ಸೇರಿದಂತೆ ಅವರ ವಿವಿಧ ಬೇಡಿಕೆಗಳನ್ನು ಶೀಘ್ರವೇ ಈಡೇರಿಸಬೇಕೆಂದು ಜೆಡಿಎಸ್ ಮುಖಂಡ ಮರಿತಿಬ್ಬೇಗೌಡ ಒತ್ತಾಯಿಸಿದ್ದಾರೆ. 

ಶನಿವಾರ ವಿಧಾನಪರಿಷತ್‌ನಲ್ಲಿ ನಿಯಮ 330ಎ ಅಡಿಯಲ್ಲಿ ವಿಷಯ ಪ್ರಸ್ತಾಪಿಸಿದ ಅವರು, ಅತಿಥಿ ಉಪನ್ಯಾಸಕರಿಗೆ ನೀಡುತ್ತಿರುವ 13ಸಾವಿರ ಮತ್ತು 11ಸಾವಿರ ಗೌರವಧನವನ್ನು ಕೂಡಲೇ ಬಿಡುಗಡೆ ಮಾಡಬೇಕು. ಹಾಗೂ ಅರ್ಹ ವಿದ್ಯಾರ್ಹತೆಯುಳ್ಳ ಉಪನ್ಯಾಸಕರನ್ನು ಕಾಯಂಗೊಳಿಸಲು ವಿಶೇಷ ನಿಯಮಗಳನ್ನು ರೂಪಿಸಬೇಕೆಂದರು.

ರಾಜ್ಯದ 410ಸರಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರುಗಳಿಗೆ 5ಸಾವಿರ ರೂ.ಗೌರವಧನವನ್ನು ಹೆಚ್ಚಳ ಮಾಡುವ ಸಂಬಂಧ ಸಮ್ಮಿಶ್ರ ಸರಕಾರದಲ್ಲಿ ಪ್ರಸ್ತಾವನೆಯನ್ನು ಆರ್ಥಿಕ ಇಲಾಖೆಗೆ ಸಲ್ಲಿಸಲಾಗಿತ್ತು. ಅದಕ್ಕೆ ಶೀಘ್ರವೇ ಅನುಮೋದನೆ ನೀಡಬೇಕೆಂದು ಅವರು ಒತ್ತಾಯಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News