ನೆರೆ ಸಂತ್ರಸ್ಥರಿಗೆ ರೆಡ್‌ಕ್ರಾಸ್‌ನಿಂದ ಪರಿಹಾರ ಸಾಮಗ್ರಿ ವಿತರಣೆ

Update: 2019-10-12 16:30 GMT

ಉಡುಪಿ, ಅ.12:ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಉಡುಪಿ ಜಿಲ್ಲಾ ಘಟಕದ ವತಿಯಿಂದ ಅಜ್ಜರಕಾಡಿನಲ್ಲಿರುವ ರೆಡ್‌ಕ್ರಾಸ್ ಭವನದ ಹೆನ್ರಿ ಡ್ಯುನಾಂಟ್ ಹಾಲ್‌ನಲ್ಲಿ ಜಿಲ್ಲೆಯ ಆಯ್ದ 65ಕ್ಕೂ ಅಧಿಕ ನೆರೆ ಸಂತ್ರಸ್ತರಿಗೆ ಪರಿಹಾರ ಸಾಮಗ್ರಿಗಳನ್ನು ಇತ್ತೀಚೆಗೆ ವಿತರಿಸಲಾಯಿತು.

ಉಡುಪಿ ಜಿಪಂನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರೀತಿ ಗೆಹ್ಲೋಟ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ರೆಡ್‌ಕ್ರಾಸ್ ಸಂಸ್ಥೆಯ ಉಡುಪಿ ಜಿಲ್ಲಾ ಘಟಕ ಕಳೆದ 2 ದಶಕಗಳಿಂದ ಜನಸಾಮಾನ್ಯರು, ಬಡಬಗ್ಗರಿಗೆ, ವಿಕಲಚೇತನರನ್ನು ಗುರುತಿಸಿ ನೀಡುತ್ತಿರುವ ಸಹಾಯ ನಿಜಕ್ಕೂ ಅಭಿನಂದನಾರ್ಹ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಡಾ. ಉಮೇಶ್ ಪ್ರಭು ವಹಿಸಿದ್ದರು. ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಆಡಳಿತ ಸಮಿತಿ ಸದಸ್ಯ ಬಸ್ರೂರು ರಾಜೀವ ಶೆಟ್ಟಿ, ಗೌರವ ಖಜಾಂಚಿ ಟಿ.ಚಂದ್ರಶೇಖರ್, ಗೌರವ ಕಾರ್ಯದರ್ಶಿ ಬಾಲಕೃಷ್ಣ ಶೆಟ್ಟಿ ಕೆ. ಹಾಗೂ ಆಡಳಿತ ಮಂಡಳಿ ಸದಸ್ಯರು ಉಪಸ್ಥಿತರಿದ್ದರು.

ಡಾ.ಅಶೋಕ್ ಕುಮಾರ್ ವೈ.ಜಿ. ಅತಿಥಿಗಳನ್ನು ಸ್ವಾಗತಿಸಿದರೆ, ಕೆ. ಜಯರಾಮ್ ಆಚಾರ್ಯ ಕಾರ್ಯಕ್ರಮವನ್ನು ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News