ಸಲ್ಮಾನ್ ಖಾನ್ ಮುಂಬೈ ನಿವಾಸದ ಹೊರಗೆ ಬಿಗಿಬಂದೋಬಸ್ತ್

Update: 2019-10-13 05:27 GMT

ಮುಂಬೈ, ಅ.13: ಭಾರತೀಯ ಸಂಸ್ಕೃತಿಗೆ ವಿರುದ್ಧವಾದ ಹಾಗೂ ಅಶ್ಲೀಲತೆಯನ್ನು ಪ್ರಚೋದಿಸುವ ಹೊಸ ಕಲ್ಪನೆಯನ್ನು ಹೊಂದಿರುವ 13ನೇ ಆವೃತ್ತಿಯ ಬಿಗ್ ಬಾಸ್ ರಿಯಾಲಿಟಿ ಶೋ ಕಾಯಕ್ರಮದ ಪ್ರಸಾರವನ್ನು ನಿಷೇಧಿಸಬೇಕೆಂದು ಆಗ್ರಹಿಸಿ ಪ್ರತಿಭಟನೆ ನಡೆದ ಬಳಿಕ ಮುಂಬೈನ ಬಾಂದ್ರಾದಲ್ಲಿರುವ ಬಾಲಿವುಡ್ ನಟ ಸಲ್ಮಾನ್ ಖಾನ್ ಅವರ ನಿವಾಸದ ಹೊರಗೆ ಬಿಗಿ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿದೆ.

ಸಲ್ಮಾನ್ ಖಾನ್ ಅವರ ಬಾಂದ್ರಾ ಸ್ಟಾಂಡ್‌ನಲ್ಲಿರುವ ನಿವಾಸದ ಹೊರಗೆ ಶುಕ್ರವಾರ ಕರ್ಣಿ ಸೇನೆ ಸಹಿತ ಪ್ರತಿಭಟನಾಕಾರರ ಗುಂಪು ಪ್ರತಿಭಟನೆ ಹಮ್ಮಿಕೊಂಡಿತ್ತು.

‘‘ಸಲ್ಮಾನ್ ಖಾನ್ ನಿವಾಸದ ಹೊರಗೆ ಜಮಾಯಿಸಿದ್ದ ಪ್ರತಿಭಟನಾಕಾರರನ್ನು ಬಂಧಿಸಲಾಗಿದ್ದು, ನಟನ ಮನೆಯ ಹೊರಗೆ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ’’ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News