ಬಂಟ್ವಾಳ: ಪಿಎಫ್ಐ ವತಿಯಿಂದ ಮ್ಯಾರಥನ್ ರ್ಯಾಲಿ ಹಾಗೂ ಪ್ರಾತ್ಯಕ್ಷಿಕೆ

Update: 2019-10-13 08:10 GMT

ಬಂಟ್ವಾಳ : ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಬಂಟ್ವಾಳ ತಾಲೂಕು ಸಮಿತಿ ವತಿಯಿಂದ ‘ಜನಾರೋಗ್ಯವೇ ರಾಷ್ಟ್ರಶಕ್ತಿ’ ರಾಷ್ಟೀಯ ಆರೋಗ್ಯ ಅಭಿಯಾನದ ಭಾಗವಾಗಿ ಮ್ಯಾರಥಾನ್ ರ್ಯಾಲಿ ಹಾಗೂ ಯೋಗ ಪ್ರಾತ್ಯಕ್ಷಿಕೆ ರವಿವಾರ ನಡೆಯಿತು.

ಪಾಪ್ಯುಲರ್ ಫ್ರಂಟ್ ಬಂಟ್ವಾಳ ತಾಲೂಕು ಅಧ್ಯಕ್ಷ ಇಜಾಝ್ ಅಹ್ಮದ್ ಧ್ವಜ ಹಸ್ತಾಂತರ ಮಾಡುವ ಮೂಲಕ ಮ್ಯಾರಥಾನ್ ರ್ಯಾಲಿಗೆ ಚಾಲನೆ ನೀಡಿದರು.

ಬಿ.ಸಿ ರೋಡಿನ ನಾರಾಯಣ ವೃತ್ತದಿಂದ ಮ್ಯಾರಥನ್ ರ್ಯಾಲಿ ಪ್ರಾರಂಭವಾಗಿ ಕೈಕಂಬ ಜಂಕ್ಷನ್ ನಲ್ಲಿ ಸಮಾಪ್ತಿಗೊಂಡಿತು. ಬಳಿಕ ಪಾಪ್ಯುಲರ್ ಫ್ರಂಟ್ ಬಂಟ್ವಾಳ ತಂಡದಿಂದ ಆತ್ಮ ರಕ್ಷಣಾ ಕಲೆ ಹಾಗೂ ಯೋಗ ಪ್ರಾತ್ಯಕ್ಷಿಕೆ ಡೆಮೋ ಪ್ರದರ್ಶಿಸಲಾಯಿತು.

ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿ ಮಾತನಾಡಿದ ಪಾಪ್ಯುಲರ್ ಫ್ರಂಟ್ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಹನೀಫ್ ಕಾಟಿಪಳ್ಳ ಮಾತನಾಡಿ ಜನರಲ್ಲಿ ಆರೋಗ್ಯದ ಬಗ್ಗೆ ಕಾಳಜಿಯು ಕ್ಷೀಣಿಸುತ್ತಿದ್ದು, ಉತ್ತಮ ಆರೋಗ್ಯಯುತ ಸಮಾಜವನ್ನು ನಿರ್ಮಿಸುವ ಉದ್ದೇಶದಿಂದ ಈ ಅಭಿಯಾನ ವನ್ನು ಹಮ್ಮಿಕೊಳ್ಳಲಾಗಿದೆ. ಒಂದು ಸಮುದಾಯ ಅಥವಾ ಜನಾಂಗ ಅಭಿವೃದ್ಧಿ ಹೊಂದಬೇಕಾದರೆ ಮುಖ್ಯವಾಗಿ ಆ ಸಮೂಹವು ಆರ್ಥಿಕ, ಶೈಕ್ಷಣಿಕ, ಮಾನಸಿಕ ಹಾಗೂ ದೈಹಿಕವಾಗಿ ಸಬಲೀಕರಣಗೊಂಡಾಗ ಮಾತ್ರ, ಈ ನಿಟ್ಟಿನಲ್ಲಿ ಫ್ಯಾಶಿಸಂ ಈ ದೇಶಕ್ಕೆ ಮಾರಕಾವಾಗಿದ್ದು ಇದನ್ನು ಎದುರಿಸಲು ಎಲ್ಲಾ ರೀತಿಯಲ್ಲಿ ನಮ್ಮನ್ನು ಸಜ್ಜುಗೊಳಿಸಬೇಕು ಎಂದು ಕರೆ ನೀಡಿದರು.

ಬಂಟ್ವಾಳ ತಾಲೂಕು ಅಧ್ಯಕ್ಷ ಇಜಾಝ್ ಅಹ್ಮದ್ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು. ಅತಿಥಿಗಳಾಗಿ ಎಸ್.ಡಿ.ಪಿ.ಐ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಾಹುಲ್ ಎಸ್.ಎಚ್, ಪಿಎಫ್.ಐ ತಾಲೂಕು ಪ್ರಧಾನ ಕಾರ್ಯದರ್ಶಿ ಸಲೀಂ ಫರಂಗಿಪೇಟೆ,  ಎಸ್.ಡಿ.ಪಿ.ಐ ಬಂಟ್ವಾಳ ಪುರಸಭಾ ಸಮಿತಿ ಅಧ್ಯಕ್ಷ ಮೂನಿಶ್ ಅಲಿ ಮತ್ತು ಪಿ.ಎಫ್.ಐ ಬಿ.ಸಿ.ರೋಡ್ ವಲಯ ಅಧ್ಯಕ್ಷ ರಹಿಮಾನ್ ಗೂಡಿನಬಳಿ ಉಪಸ್ಥಿತರಿದ್ದರು. ಶಬೀರ್ ರಹಿಮಾನ್ ಸ್ವಾಗತಿಸಿದರು, ಮೊಯ್ದಿನ್ ಖಾದರ್ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News