ಬಂಟ್ವಾಳ: ಮಹರ್ಷೀ ವಾಲ್ಮೀಕಿ ಜಯಂತಿ ಕಾರ್ಯಕ್ರಮ

Update: 2019-10-13 10:20 GMT

ಬಂಟ್ವಾಳ, ಅ. 13: ರಾಮಾಯಾಣ ರಚನೆಕಾರ ಮಹರ್ಷೀ ವಾಲ್ಮೀಕಿಯಂತಹ ಮಹಾನ್ ವ್ಯಕ್ತಿಗಳ ಆಚರಣೆಗಳನ್ನು ತಾಲೂಕು ಮಟ್ಟದಲ್ಲಿ ಸೀಮಿತಗೊಳಿಸದೇ ಗ್ರಾಮೀಣ ಮಟ್ಟದಲ್ಲಿ ನಡೆದಾಗ ಮಾನವಕುಲಕ್ಕೆ ಒಳ್ಳೆಯ ಸಂದೇಶ ರವಾನೆ ಹಾಗೂ ಅವರ ಆದರ್ಶಗಳ ಪಾಲನೆ ಸಾಧ್ಯ ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಹೇಳಿದ್ದಾರೆ.

ಬಂಟ್ವಾಳ ತಾಲೂಕು ಆಡಳಿತ, ತಾಲೂಕು ಪಂಚಾಯತ್ ಬಂಟ್ವಾಳ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಆಶ್ರಯದಲ್ಲಿ ಬಿ.ಸಿ.ರೋಡಿನ ಎಸ್‍ಜಿಎಸ್‍ಆರ್‍ವೈನ ಸಭಾಂಗಣದಲ್ಲಿ ರವಿವಾರ ನಡೆದ ಮಹರ್ಷೀ ವಾಲ್ಮೀಕಿ ಜಯಂತಿಯ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಮಹರ್ಷೀ ವಾಲ್ಮೀಕಿಯ ಆದರ್ಶಗಳನ್ನು ಪ್ರತಿಯೊಬ್ಬರೂ ಅಳವಡಿಸಿಕೊಳ್ಳಬೇಕಾದ್ದು ಇಂದಿನ ಅನಿವಾರ್ಯತೆಯಾಗಿರ. ಇಚ್ಛಾಶಕ್ತಿ ಇದ್ದಾಗ ವ್ಯಕ್ತಿ ಶಕ್ತಿಯಾಗಬಹುದು ಎಂಬುದನ್ನು ಜಗತ್ತಿಗೇ ತೋರಿಸಿಕೊಟ್ಟವರು ಎಂದರು. ಶಿಕ್ಷಕ ನಾರಾಯಣ ಗೌಡ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು.

ಈ ಸಂದರ್ಭದಲ್ಲಿ ತಾಪಂ ಉಪಾಧ್ಯಕ್ಷ ಅಬ್ಬಾಸ್ ಅಲಿ, ಜಿಪಂ ಸದಸ್ಯ ತುಂಗಪ್ಪ ಬಂಗೇರ, ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಅಧ್ಯಕ್ಷೆ, ಬಂಟ್ವಾಳ ತಹಶೀಲ್ದಾರ್ ರಶ್ಮೀ ಎಸ್.ಆರ್ ಉಪಸ್ಥಿತರಿದ್ದರು. ತಾಲೂಕು ಸಮಾಜ ಕಲ್ಯಾಣಾಧಿಕಾರಿ ಮೋಹನ್ ಕುಮಾರ್ ಸ್ವಾಗತಿಸಿದರು. ಆಶ್ರಮ ಶಾಲೆಯ ಮೇಲ್ವಿಚಾರಕ ಪ್ರಸಾದ್ ವಂದಿಸಿದರು. ಮಂಜು ವಿಟ್ಲ ಕಾರ್ಯಕ್ರಮ ನಿರ್ವಹಿಸಿದರು.

ಸಮಾಜ ಕಲ್ಯಾಣ ಇಲಾಖೆಯ ಆಶ್ರಯದಲ್ಲಿ ಬಿ.ಸಿ.ರೋಡಿನಲ್ಲಿ ನಡೆದ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ನೀರಿನ ಪ್ಲಾಸ್ಟಿಕ್ ಬಾಟಲಿಗಳೇ ಮೇಳೈಸಿತು.

ಸ್ವಚ್ಛಭಾರತದ ಪರಿಕಲ್ಪನೆಯಡಿ ಪ್ಲಾಸ್ಟಿಕ್ ಬಳಕೆಯನ್ನು ನಿಷೇಧಿಸಿ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಕರೆ ನೀಡಿದ್ದು, ದೇಶದಾದ್ಯಂತ ಸಂಚಲನಕ್ಕೆ ಕಾರಣವಾಗಿದ್ದಲ್ಲದೆ ಇದರ ಬಗ್ಗೆ ಆಯಾ ತಾಲೂಕು ಮಟ್ಟದಲ್ಲಿ ಜಾಗೃತಿ ಕಾರ್ಯಗಳು ನಡೆಯುತ್ತಿವೆ. ಆದರೆ, ಸರಕಾರಿ ಇಲಾಖೆಯೊಂದು ಸರಕಾರಿ ಆಚರಣಾ ಕಾರ್ಯಕ್ರಮದಲ್ಲಿ ಪ್ಲಾಸ್ಟಿಕ್ ಬಾಟಲಿಗಳಲ್ಲಿ ಸಭಿಕರಿಗೆ ನೀರು ಒದಗಿಸಿದ್ದು ಚರ್ಚೆಗೆ ಗ್ರಾಸವಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News