ಮಂಗಳೂರು ವಿಮಾನ ನಿಲ್ದಾಣದಲ್ಲಿ ಅಕ್ರಮ ಚಿನ್ನ ಸಾಗಾಟ ಪತ್ತೆ; ಓರ್ವ ವಶ

Update: 2019-10-13 11:54 GMT

ಮಂಗಳೂರು, ಅ.13: ದುಬೈಯಿಂದ ಮಂಗಳೂರಿಗೆ ಬರುತ್ತಿದ್ದ ಪ್ರಯಾಣಿಕನಿಂದ ಕಸ್ಟಮ್ಸ್ ಅಧಿಕಾರಿಗಳು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಚಿನ್ನವನ್ನು ಶನಿವಾರ ಪತ್ತೆ ಹಚ್ಚಿದ್ದಾರೆ.

ಏರ್ ಇಂಡಿಯಾ ವಿಮಾನದಲ್ಲಿ ನಿಲ್ದಾಣಕ್ಕೆ ಬಂದಿಳಿದ ಪ್ರಯಾಣಿಕರ ತಪಾಸಣೆಯ ವೇಳೆ ಓರ್ವ ಪ್ರಯಾಣಿಕ ಸುಮಾರು 524.78 ಗ್ರಾಂ ತೂಕದ ಚಿನ್ನವನ್ನು ಬಚ್ಚಿಟ್ಟುಕೊಂಡು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಎನ್ನಲಾಗಿದ್ದು, ತಕ್ಷಣ ಇದನ್ನು ವಶಪಡಿಸಿಕೊಂಡ ಕಸ್ಟಮ್ಸ್ ಅಧಿಕಾರಿಗಳು ಮುಂದಿನ ಕ್ರಮಕ್ಕಾಗಿ ಸೊತ್ತು ಸಮೇತ ಆರೋಪಿಯನ್ನು ಬಜ್ಪೆ ಪೊಲೀಸರಿಗೆ ಹಸ್ತಾಂತರಿಸಿದ್ದಾರೆ.

ವಶಪಡಿಸಿಕೊಂಡ ಚಿನ್ನದ ಬೆಲೆ 19.62 ಲಕ್ಷ ರೂ. ಎಂದು ಅಂದಾಜಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News