×
Ad

ರಮೇಶ್ ಆತ್ಮಹತ್ಯೆಯನ್ನು ರಾಜಕೀಯಕ್ಕೆ ಬಳಸುವುದು ಸಲ್ಲ: ಜಗದೀಶ್ ಶೆಟ್ಟರ್

Update: 2019-10-13 22:44 IST

ಹುಬ್ಬಳ್ಳಿ, ಅ.13: ಮಾಜಿ ಸಚಿವ ಹಾಗೂ ಶಾಸಕ ಡಾ.ಜಿ.ಪರಮೇಶ್ವರ್‌ರ ಆಪ್ತ ಸಹಾಯಕ ರಮೇಶ್ ಆತ್ಮಹತ್ಯೆಯನ್ನು ರಾಜಕೀಯಕ್ಕೆ ಬಳಸಿಕೊಳ್ಳುತ್ತಿರುವುದು ಸರಿಯಲ್ಲ ಎಂದು ಸಚಿವ ಜಗದೀಶ್ ಶೆಟ್ಟರ್ ಹೇಳಿದ್ದಾರೆ.

ರವಿವಾರ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಮೇಶ್ ಪ್ರಕರಣವನ್ನು ರಾಜಕೀಯಗೊಳಿಸಿ ಐಟಿ ದಾಳಿಯನ್ನು ಬದಿಗೊತ್ತಿ ಜನರನ್ನು ಬೇರೆಡೆ ಸೆಳೆಯಲು ಕಾಂಗ್ರೆಸ್ ತಂತ್ರ ರೂಪಿಸಿದೆ. ರಮೇಶ್ ಸಾವಿಗೆ ಕಾರಣ ಏನೆಂಬುದರ ಬಗ್ಗೆ ಸಂಪೂರ್ಣ ತನಿಖೆ ನಡೆಯಲಿ. ನಿಜಾಂಶ ಎಲ್ಲರಿಗೂ ಗೊತ್ತಾಗಲಿ ಎಂದರು.

ಪರಮೇಶ್ವರ್‌ರ ಮನೆ ಹಾಗೂ ಶಿಕ್ಷಣ ಸಂಸ್ಥೆಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದನ್ನು ಕಾಂಗ್ರೆಸ್ ರಾಜಕಾರಣದ ಕಾರಣಕ್ಕೆ ಟೀಕೆ ಮಾಡುತ್ತಿದೆ. ದಾಳಿ ರಾಜಕೀಯ ಪ್ರೇರಿತವಲ್ಲ. ಇದನ್ನು ಕಾನೂನು ಪ್ರಕಾರ ಎದುರಿಸುತ್ತೇನೆ ಎಂದು ಖುದ್ದು ಪರಮೇಶ್ವರ್ ಅವರೇ ಹೇಳಿದ್ದಾರೆ. ಆದರೂ, ಕಾಂಗ್ರೆಸ್ ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿದೆ ಎಂದು ಅಪಾದಿಸಿದರು.

ಪ್ರಧಾನಿ ನರೇಂದ್ರ ಮೋದಿ, ಗೃಹಸಚಿವ ಅಮಿತ್ ಶಾ ಮತ್ತು ಕೇಂದ್ರ ಸರಕಾರದ ಬಗ್ಗೆ ಮಾತನಾಡಲು ಕಾಂಗ್ರೆಸ್‌ನವರಿಗೆ ಯಾವ ವಿಷಯಗಳೂ ಸಿಗುತ್ತಿಲ್ಲ. ಆದುದರಿಂದಾಗಿ ವಿನಾಕಾರಣ ಟೀಕೆ ಮಾಡಲು ಮುಂದಾಗಿದ್ದಾರೆ ಎಂದು ಶೆಟ್ಟರ್ ದೂರಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News