ಐಟಿ ದಾಳಿ ಪ್ರಕರಣ: ಮತ್ತೆ ಹೈಕೋರ್ಟ್ ಮೆಟ್ಟಿಲೇರಿದ ಡಿಕೆಶಿಯ ನಾಲ್ವರು ಆಪ್ತರು

Update: 2019-10-14 14:30 GMT

ಬೆಂಗಳೂರು, ಅ.14: ಹೊಸದಿಲ್ಲಿ ನಿವಾಸಗಳ ಮೇಲಿನ ಐಟಿ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಕೆಶಿ ಅವರ ನಾಲ್ವರು ಆಪ್ತರು ಜಾರಿ ನಿರ್ದೇಶನಾಲಯ(ಈಡಿ) ತಮ್ಮನ್ನು ಬಂಧಿಸದಂತೆ ನಿರ್ದೇಶಿಸಲು ಕೋರಿ ಮತ್ತೆ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ನ್ಯಾಯಪೀಠವು ನಾಳೆ(ಅ.15) ಅರ್ಜಿ ವಿಚಾರಣೆ ನಡೆಸುವುದಾಗಿ ತಿಳಿಸಿದೆ. 

ಸುಪ್ರೀಂಕೋರ್ಟ್ ರಜೆ ಇರುವ ಕಾರಣ ಮೇಲ್ಮನವಿ ಸಲ್ಲಿಸಲು ಆಗಿಲ್ಲ. ಅಲ್ಲದೆ, ಈಡಿ ಅವರು ವಿಚಾರಣೆಗೆ ಹಾಜರಾಗುವಂತೆ ಈಗಾಗಲೇ ನೋಟಿಸ್ ಜಾರಿಗೊಳಿಸಿದ್ದಾರೆ ಎಂದು ಸಚಿನ್ ನಾರಾಯಣ್, ಆಂಜನೇಯ, ಸುನೀಲ್ ಶರ್ಮಾ, ರಾಜೇಂದ್ರ ಹೈಕೋರ್ಟ್‌ಗೆ ಮತ್ತೆ ಅರ್ಜಿ ಸಲ್ಲಿಸಿದ್ದು, ಈಡಿ ಬಂಧನದಿಂದ ರಕ್ಷಣೆ ಮುಂದುವರಿಸುವಂತೆ ಅರ್ಜಿಯಲ್ಲಿ ಮನವಿ ಮಾಡಿದ್ದಾರೆ. ಈ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ವಿಭಾಗೀಯ ನ್ಯಾಯಪೀಠವು ಅ.15ರಂದು ವಿಚಾರಣೆ ನಡೆಸುವುದಾಗಿ ತಿಳಿಸಿದೆ.

ಈ ಹಿಂದೆ ಡಿಕೆಶಿಯ ನಾಲ್ವರು ಆಪ್ತರಿಗೆ ಹೈಕೋರ್ಟ್ ವಿಭಾಗೀಯ ನ್ಯಾಯಪೀಠವು ನಾಲ್ಕು ವಾರ ಮಧ್ಯಂತರ ರಕ್ಷಣೆ ನೀಡಿ, ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲು ಅವಕಾಶ ಕಲ್ಪಿಸಿತ್ತು. ಈಗ ಮತ್ತೆ ಕೋರ್ಟ್ ಗೆ ಅರ್ಜಿ ಸಲ್ಲಿಕೆಯಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News