ವಿಧಾನ ಮಂಡಲ ಕಲಾಪಗಳಿಗೆ ಮಾಧ್ಯಮ ನಿಷೇಧದ ವಿರುದ್ಧ ದ.ಕ.ಜಿಲ್ಲಾ ಪತ್ರಕರ್ತರ ಸಂಘ ಮನವಿ

Update: 2019-10-14 14:32 GMT

ಮಂಗಳೂರು, ಅ.14: ವಿಧಾನ ಮಂಡಲ ಕಲಾಪಗಳಿಗೆ ವಿದ್ಯುನ್ಮಾನ ಮಾಧ್ಯಮದವರು ನಿಷೇದಿಸಿರುವುದನ್ನು ಹಿಂದಕ್ಕೆ ಪಡೆಯುವಂತೆ ಒತ್ತಾಯಿಸಿ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತ ಸಂಘದ ನಿಯೋಗವು ಮಂಗಳವಾರ ದ.ಕ.ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್‌ಗೆ ಮನವಿ ಸಲ್ಲಿಸಿತು.

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ವಿಧಾನಸಭೆ ಹಾಗೂ ವಿಧಾನ ಪರಿಷತ್ ಮಹತ್ವದ ಸ್ಥಾನವನ್ನು ಹೊಂದಿದೆ. ಜನ ಸಾಮಾನ್ಯರ ಆಶೋತ್ತರಗಳನ್ನು ನಾಡಿನ ಸರ್ವಾಗೀಣ ಅಭಿವೃದ್ಧಿ ಮತ್ತಿತರ ವಿಷಯಗಳ ಬಗ್ಗೆ ಚರ್ಚೆ ನಡೆಯುವ ವಿಧಾನ ಮಂಡಲ ಕಲಾಪಗಳನ್ನು ಟಿವಿ ಮಾಧ್ಯಮಗಳು ಪ್ರಸಾರ ಮಾಡುವುದಕ್ಕೆ ಅವಕಾಶ ಕಲ್ಪಿಸಬೇಕಿದೆ. ಇದರಿಂದ ಕಲಾಪಗಳನ್ನು ಇನ್ನಷ್ಟು ಪಾರದರ್ಶಕವಾಗಿ ಮತ್ತು ಜವಾಬ್ದಾರಿಯುತವಾಗಿ ನಡೆಸಲು ಸಾಧ್ಯವಾಗುತ್ತದೆ. ಅಗತ್ಯ ಬಿದ್ದರೆ ಅದಕ್ಕೊಂದು ಮಾಧ್ಯಮ ಸಂಹಿತೆ ರೂಪಿಸಬಹುದು.ಆದರೆ ಯಾವುದೇ ಚರ್ಚೆ ಅಭಿಪ್ರಾಯ ಪಡೆಯದೆ ಏಕಾಏಕಿ ನಿರ್ಬಂಧಿಸಿರುವುದು ಸರಿಯಲ್ಲ. ಹಾಗಾಗಿ ಇಲೆಕ್ಟ್ರಾನಿಕ್ ಮಾಧ್ಯಮಗಳಿಗೆ ನೀಡಿದ ನಿರ್ಬಂಧ ಆದೇಶವನ್ನು ಹಿಂಪಡೆದು ಕೊಳ್ಳಬೇಕೆಂದು ಸಂಘ ಆಗ್ರಹಿಸಿದೆ.

ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ, ಮಂಗಳೂರು ಪ್ರೆಸ್‌ಕ್ಲಬ್ ಅಧ್ಯಕ್ಷ ಅನ್ನು ಮಂಗಳೂರು, ಪತ್ರಕರ್ತರ ಸಂಘದ ಕಾರ್ಯಕಾರಿ ಸಮಿತಿ ಸದಸ್ಯರಾದ ಹಿಲರಿ ಕ್ರಾಸ್ತ, ಭಾಸ್ಕರ್ ರೈ ಕಟ್ಟ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News