2020ರಿಂದ ವಾಣಿಜ್ಯ ವಾಹನಗಳಿಗೆ ಫಾಸ್ಟ್‌ ಟ್ಯಾಗ್ ಜಾರಿಗೆ ಸಿದ್ಧತೆ: ಡಿಸಿಎಂ ಗೋವಿಂದ ಕಾರಜೋಳ

Update: 2019-10-14 15:32 GMT

ಬೆಂಗಳೂರು, ಅ.14: ದೇಶದ ಎಲ್ಲ ವಾಣಿಜ್ಯ ವಾಹನಗಳಿಗೆ 2020ರ ಎಪ್ರಿಲ್ 1ರಿಂದ ಜಿಎಸ್‌ಟಿಎನ್‌ಎ ವೇ ಬಿಲ್ಲುಗಳ ವ್ಯವಸ್ಥೆಗೆ ಫಾಸ್ಟ್‌ಟ್ಯಾಗ್‌ನೊಂದಿಗೆ ಸಮನ್ವಯಗೊಳಿಸಲಾಗುವುದು ಎಂದು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ತಿಳಿಸಿದರು.

ಸೋಮವಾರ ಹೊಸದಿಲ್ಲಿಯಲ್ಲಿ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಆಯೋಜಿಸಿದ್ದ ಏಕರೂಪದ ತೆರಿಗೆ ಟೂಲ್ ಶುಲ್ಕ ಕುರಿತ ಒನ್ ನೇಷನ್-ಒನ್ ಫಾಸ್ಟ್‌ಟ್ಯಾಗ್ ಶೀರ್ಷಿಕೆಯ ರಾಷ್ಟ್ರಮಟ್ಟದ ವಿಚಾರ ಸಂಕಿರಣದಲ್ಲಿ ಭಾಗವಹಿಸಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ಪ್ರಸ್ತುತವಾಗಿ ಮ್ಯಾನ್ಯೂಯಲ್ ಟೋಲ್ ರೀತಿಯಲ್ಲಿ ಸಂಗ್ರಹ ಮಾಡಲಾಗುತ್ತಿದೆ. ಇದರಿಂದ ಟೋಲ್ ಪ್ಲಾಜಾಗಳಲ್ಲಿ ವಾಹನ ಸಂಖ್ಯೆ ಹೆಚ್ಚಳವಾಗಿ ಪ್ರಯಾಣಿಕರಿಗೆ ಹೆಚ್ಚಿನ ಸಮಯ ಹಾಗು ಅನಾವಶ್ಯಕ ತೊಂದರೆಯಾಗುತ್ತಿದೆ ಎಂದು ಅವರು ಹೇಳಿದರು. ವಾಹನಗಳು ಹೆಚ್ಚು ಹೊತ್ತು ಕಾಯುವಿಕೆಯಿಂದ ಅನಾವಶ್ಯಕವಾಗಿ ಇಂಧನ ವ್ಯರ್ಥವಾಗುತ್ತದೆ ಹಾಗೂ ಪರಿಸರ ಮಾಲಿನ್ಯ ಉಂಟಾಗುತ್ತದೆ. ಕಾಯುವಿಕೆಯಿಂದ ಮಾನವ ಸಂಪನ್ಮೂಲವೂ ಸಹ ವ್ಯರ್ಥವಾಗುತ್ತದೆ. ಈ ಎಲ್ಲ ಸಮಸ್ಯೆಗಳ ಪರಿಹಾರಕ್ಕೆ ಈ ಯೋಜನೆಯನ್ನು ಜಾರಿಗೊಳಿಸಲಾಗುತ್ತದೆ ಎಂದು ಗೋವಿಂದ ಕಾರಜೋಳ ತಿಳಿಸಿದರು.

ಈ ಯೋಜನೆಯ ಅನುಷ್ಠಾನಕ್ಕಾಗಿ ಕೇಂದ್ರ ಸರಕಾರವು ಶೇ.50ರಷ್ಟು ಬಂಡವಾಳ ವೆಚ್ಚ ಹಾಗು ಶೇ.80ರಷ್ಟು ನಿರ್ವಹಣಾ ವೆಚ್ಚವನ್ನು ಭರಿಸಲಿದೆ. ರಾಜ್ಯದಲ್ಲಿ ಸುಮಾರು 32 ರಸ್ತೆಗಳಲ್ಲಿ ಫಾಸ್ಟ್‌ಟ್ಯಾಗ್ ವ್ಯವಸ್ಥೆಯನ್ನು ಅಳವಡಿಸಲು ಕೇಂದ್ರ ಸರಕಾರದೊಂದಿಗೆ ಒಡಂಬಡಿಕೆ ಮಾಡಿಕೊಳ್ಳಲಾಗಿದೆ. ರಾಜ್ಯ ಸರಕಾರಗಳೊಂದಿಗೆ ಕೇಂದ್ರ ಸರಕಾರವು ಒಡಂಬಡಿಕೆ ಮಾಡಿಕೊಳ್ಳಲಿದೆ. ರಾಜ್ಯದಲ್ಲಿ 40 ರಸ್ತೆಗಳ 2480 ಕಿ.ಮೀ ಹೊರ ರಸ್ತೆಗಳ ಮಂಜೂರಾತಿಗೆ ಮನವಿಯನ್ನೂ ಮಾಡಲಾಗಿದೆ ಎಂದು ಅವರು ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News