ಬೆಂಗಳೂರು ನಗರದಲ್ಲಿ ತ್ಯಾಜ್ಯ ನಿರ್ವಹಣೆ ವಿಚಾರ: ಸರಕಾರ, ಬಿಬಿಎಂಪಿಗೆ ಹೈಕೋರ್ಟ್ ತರಾಟೆ

Update: 2019-10-14 17:45 GMT

ಬೆಂಗಳೂರು, ಅ.14: ನಗರದಲ್ಲಿ ತ್ಯಾಜ್ಯ ನಿರ್ವಹಣೆ ವಿಚಾರದಲ್ಲಿ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ನೀಡಿರುವ ಪ್ರಮಾಣ ಪತ್ರ, ಬಿಬಿಎಂಪಿ ಹಾಗೂ ಸರಕಾರ ನೀಡಿರುವ ಮಾಹಿತಿಗೂ ಅಜಗಜಾಂತರವಿದೆ ಎಂದು ತರಾಟೆಗೆ ತೆಗೆದುಕೊಂಡಿರುವ ಹೈಕೋರ್ಟ್, ಈ ಬಗ್ಗೆ ಅ.15ರಂದು ಆದೇಶ ನೀಡುವುದಾಗಿ ತಿಳಿಸಿದೆ.

ಈ ಕುರಿತು ವಕೀಲ ಜಿ.ಆರ್.ಮೋಹನ್ ಹಾಗೂ ಇತರರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕಾ ಅವರಿದ್ದ ವಿಭಾಗೀಯ ನ್ಯಾಯಪೀಠದಲ್ಲಿ ನಡೆಯಿತು. ಅರ್ಜಿದಾರರ ಪರ ವಾದಿಸಿದ ವಕೀಲರು, ನಗರದಲ್ಲಿ ತ್ಯಾಜ್ಯ ನಿರ್ವಹಣೆ ವಿಚಾರದಲ್ಲಿ ಗುತ್ತಿಗೆದಾರರು, ಸರಕಾರ ಹಾಗೂ ಪಾಲಿಕೆ ಸದಸ್ಯರು ಕಸ ಸಮಸ್ಯೆ ನಿರ್ವಹಣೆ ಮಾಡದೆ ಬಹಳಷ್ಟು ಅಕ್ರಮ ಎಸಗಿದ್ದಾರೆ ಎಂದು ಪೀಠಕ್ಕೆ ತಿಳಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠವು ಮಾಡುವುದೆಲ್ಲಾ ಕಾನೂನು ಬಾಹಿರವಾಗಿದ್ದರೂ ನೈಸರ್ಗಿಕವಾಗಿ ಪರಿಸರಕ್ಕೆ ಹಾನಿಯಾಗದಂತೆ ಮಾಡುತ್ತಿದ್ದೀವಿ ಎನ್ನುವುದು ನಿಮ್ಮ ವಾದ ಅಲ್ವಾ ಎಂದು ಸರಕಾರದ ಪರ ವಕೀಲರನ್ನು ತೀವ್ರ ತರಾಟೆಗೆ ತೆಗೆದುಕೊಂಡಿತು. ನಾಳೆ ಆದೇಶ ನೀಡುವುದಾಗಿ ತಿಳಿಸಿ, ಅರ್ಜಿ ವಿಚಾರಣೆಯನ್ನು ಮುಂದೂಡಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News