×
Ad

ನೀರಿನಲ್ಲಿ ಮುಳುಗಿ ಮಕ್ಕಳು ಮೃತ್ಯು ಪ್ರಕರಣ: ಸ್ಥಳಕ್ಕೆ ಜಿಲ್ಲಾಧಿಕಾರಿ, ಉಪವಿಭಾಗಾಧಿಕಾರಿ ಭೇಟಿ

Update: 2019-10-14 23:44 IST

ಹನೂರು, ಅ.14: ಕ್ಷೇತ್ರ ವ್ಯಾಪ್ತಿಯ ಪೊನ್ನಾಚಿ ಹಾಗೂ ಮರೂರು ಗ್ರಾಮದ ಬಳಿ ಬರುವ ರಾಮೇಗೌಡನ ಹಳ್ಳಿಯಲ್ಲಿ ಹಳ್ಳದ ನೀರಿನಲ್ಲಿ ಮುಳುಗಿ ಮೃತಪಟ್ಟ ಮೂವರು ಮಕ್ಕಳ ಅಂತಿಮ ದರ್ಶನವನ್ನು ಜಿಲ್ಲಾಧಿಕಾರಿ ಬಿ.ಬಿ.ಕಾವೇರಿ ಹಾಗೂ ಉಪ ವಿಭಾಗಾಧಿಕಾರಿ ನಿಖಿತಾ ಚಿನ್ನಸ್ವಾಮಿ ಪಡೆದು, ದುರಂತ ನಡೆದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಮಕ್ಕಳ ಸಾವಿನ ಬಗ್ಗೆ ಗ್ರಾಮ ಲೆಕ್ಕಾಧಿಕಾರಿ ಶಿವಕುಮಾರ್ ಹಾಗೂ ಪೋಷಕರು ಮತ್ತು ಗ್ರಾಮಸ್ಥರಿಂದ ಬಿ.ಬಿ.ಕಾವೇರಿ ಅವರು ಮಾಹಿತಿ ಪಡೆದರು.

ಈ ಸಂದರ್ಭ ತಹಶೀಲ್ದಾರ್ ಎ.ಹೆಚ್.ನಾಗರಾಜು, ಆರ್.ಐ.ಮಾದೇಶ್, ಮ.ಮ.ಬೆಟ್ಟ ಪೊಲೀಸ್ ಇನ್ಸ್ ಪೆಕ್ಟರ್ ಮಹೇಶ್, ಸಿಬ್ಬಂದಿ ವರ್ಗದವರು ಇದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News