ಭಾರೀ ಮಳೆಗೆ ಮನೆಯ ಮೇಲ್ಫಾವಣಿ ಕುಸಿದು ಮೂವರು ಮೃತ್ಯು

Update: 2019-10-15 11:52 GMT
ಸಾಂದರ್ಭಿಕ ಚಿತ್ರ

ಕೊಪ್ಪಳ, ಅ.15: ಭಾರೀ ಮಳೆ ಸುರಿದ ಪರಿಣಾಮ, ಮನೆಯ ಮೇಲ್ಛಾವಣಿ ಕುಸಿದು ಮೂವರು ಮಕ್ಕಳು ಸಾವನ್ನಪ್ಪಿರುವ ಘಟನೆ ಇಲ್ಲಿನ ಕೊಪ್ಪಳ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಕೊಪ್ಪಳ ತಾಲೂಕಿನ ಯಲಮಗೇರಿ ಗ್ರಾಮದ 22 ವರ್ಷದ ಸುಜಾತ, 15 ವರ್ಷದ ಅಮರೇಶ, 18 ವರ್ಷದ ಗವಿಸಿದ್ದಪ್ಪ ಸಾವನ್ನಪ್ಪಿದ್ದು, ಮಂಗಳವಾರ ಮುಂಜಾನೆ ಈ ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ.

ಕಳೆದ ಎರಡು ವಾರದಿಂದ ಕೊಪ್ಪಳ ತಾಲೂಕಿನ ಯಲಮಗೇರಿ ಗ್ರಾಮದಲ್ಲಿ ಭಾರೀ ಮಳೆಯಾಗುತ್ತಿದ್ದ ಹಿನ್ನೆಲೆ ಮನೆಯ ಮೇಲ್ಛಾವಣಿ ಸಂಪೂರ್ಣ ಶಿಥಿಲಗೊಂಡು ಏಕಾಏಕಿ ಕುಸಿದು ಬಿದ್ದಿದೆ. ಮನೆಯ ಮೇಲ್ಛಾವಣಿ ಕುಸಿಯುತ್ತಿದ್ದಂತೆ ಕೆಳಗೆ ಮಲಗಿದ್ದ ಮೂವರಲ್ಲಿ ಬಾಲಕ ಗವಿಸಿದ್ದಪ್ಪ ಸ್ಥಳದಲ್ಲೆ ಮೃತ ಪಟ್ಟಿದ್ದಾನೆ ಎನ್ನಲಾಗಿದೆ.

ಸುಜಾತ, ಅಮರೇಶಗೆ ತೀವ್ರ ಉಸಿರಾಟದ ತೊಂದರೆಯಾಗಿದೆ. ಕೂಡಲೇ ಕೊಪ್ಪಳ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿದರೂ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News