ಸಾಧಕರ ಬದುಕಿನಿಂದ ಸ್ಪೂರ್ತಿ ಪಡೆಯಿರಿ: ಪ್ರೊ.ನಿತ್ಯಾನಂದ

Update: 2019-10-15 14:11 GMT

ಕುಂದಾಪುರ, ಅ.15: ತನ್ನಲ್ಲಿರುವ ಪ್ರತಿಭೆಯ ಸದ್ಭಳಕೆ ಮಾಡದಿರುವುದು ಹಾಗೂ ಸಾಮಾನ್ಯ ಪ್ರತಿಭೆಯನ್ನೇ ವೈಭವೀಕರಿಸಿ ಪ್ರದರ್ಶಿಸುವುದು ಸಮಾಜದಲ್ಲಿ ಕಲೆಯ ಉನ್ನತಿಗೆ ಹಿನ್ನಡೆಯಾಗುತ್ತದೆ. ವಿದ್ಯಾರ್ಥಿಗಳು ಸಾಧಕರ ಬದುಕಿನಿಂದ ಸ್ಪೂರ್ತಿ ಪಡೆಯಬೇಕು ಎಂದು ಉಡುಪಿಯ ಡಾ.ಜಿ.ಶಂಕರ್ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ರಾಜ್ಯಶಾಸ್ತ್ರ ಪ್ರಾಧ್ಯಾಪಕರಾದ ಪ್ರೊ.ಎನ್. ನಿತ್ಯಾನಂದ ಅವರು ಹೇಳಿದ್ದಾರೆ.

ಕುಂದಾಪುರದ ಆರ್.ಎನ್.ಶೆಟ್ಟಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಪ್ರತಿಭಾ ಪ್ರದರ್ಶನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡು ತಿದ್ದರು.

ಕುಂದಾಪುರ ಎಜ್ಯುಕೇಷನ್ ಸೊಸೈಟಿಯ ಕಾರ್ಯದರ್ಶಿ ಎನ್.ಸೀತಾರಾಮ ನಕ್ಕತ್ತಾಯ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.ಜೊತೆ ಕಾರ್ಯದರ್ಶಿ ಕೆ.ಸುಧಾಕರ ಶೆಟ್ಟಿ ಬಾಂಡ್ಯ, ಡಾ.ಬಿ.ಬಿ.ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಕೆ.ಉಮೇಶ ಶೆಟ್ಟಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕಾಲೇಜಿನ ಪ್ರಾಂಶುಪಾಲ ನವೀನ್‌ಕುಮಾರ್ ಶೆಟ್ಟಿ ಅತಿಥಿಗಳನ್ನು ಸ್ವಾಗತಿಸಿದರು.ಸಂಖ್ಯಾ ಶಾಸ್ತ್ರ ವಿಭಾಗದ ಅರುಣ ಹೊಳ್ಳ ಅತಿಥಿಗಳನ್ನು ಪರಿಚಯಿಸಿದರು. ಹಿಂದಿ ವಿಭಾಗದ ಜಯಶೀಲಾ ಪೈ ಕಾರ್ಯಕ್ರಮ ನಿರೂಪಿಸಿ, ಸಂಸ್ಕೃತ ವಿಭಾಗದ ರವಿ ಉಪಾಧ್ಯ ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News