ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷರಾಗಿ ಅಬ್ದುಲ್ ಅಝೀಮ್ ನೇಮಕ

Update: 2019-10-15 14:14 GMT

ಬೆಂಗಳೂರು, ಅ.15: ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷರನ್ನಾಗಿ ವಿಧಾನಪರಿಷತ್ತಿನ ಮಾಜಿ ಸದಸ್ಯ ಹಾಗೂ ರಾಜ್ಯ ಬಿಜೆಪಿ ಅಲ್ಪಸಂಖ್ಯಾತರ ಮೋರ್ಚಾ ಅಧ್ಯಕ್ಷ ಅಬ್ದುಲ್ ಅಝೀಮ್‌ರನ್ನು ತಕ್ಷಣದಿಂದ ಜಾರಿಗೆ ಬರುವಂತೆ ನೇಮಕ ಮಾಡಿ ಮಂಗಳವಾರ ರಾಜ್ಯ ಸರಕಾರ ಆದೇಶ ಹೊರಡಿಸಿದೆ. 

ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರಕಾರದ ಅವಧಿಯಲ್ಲಿ ನಿವೃತ್ತ ಡಿಸಿಪಿ ಜಿ.ಎ.ಬಾವಾರನ್ನು ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿತ್ತು. ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದ ಸಚಿವ ಸಂಪುಟದಲ್ಲಿ ಸಚಿವ ಸ್ಥಾನ ಪಡೆಯಲು ಹರಸಾಹಸಪಡುತ್ತಿದ್ದ ಅಬ್ದುಲ್ ಅಝೀಮ್‌ರನ್ನು, ಇದೀಗ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.

ರೋಷನ್ ಬೇಗ್‌ಗಾಗಿ ಅಝೀಮ್ ಬಲಿ?: ಅನರ್ಹ ಶಾಸಕ ಆರ್.ರೋಷನ್ ಬೇಗ್ ಉಪ ಚುನಾವಣೆಯಲ್ಲಿ ಗೆಲುವು ಸಾಧಿಸಿದಲ್ಲಿ ಅವರಿಗೆ ಸಚಿವ ಸ್ಥಾನ ನೀಡಲು ಅಬ್ದುಲ್ ಅಝೀಮ್‌ರನ್ನು ಸಂಪುಟಕ್ಕೆ ಸೇರಿಸಲಾಗಿಲ್ಲ ಎಂಬ ಅಸಮಾಧಾನ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಮುಖಂಡರಲ್ಲಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News