ರಾಜ್ಯದ ಇತಿಹಾಸದಲ್ಲೆ ಹೊಸ ಸಂಪ್ರದಾಯಕ್ಕೆ ಮುನ್ನುಡಿ ಬರೆದ ಸ್ಪೀಕರ್ ಕಾಗೇರಿ

Update: 2019-10-15 16:17 GMT

ಬೆಂಗಳೂರು, ಅ.15: ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ತಮಗೆ ಸಲಹೆಗಾರರನ್ನು ನೇಮಿಸಿಕೊಳ್ಳುವ ಮೂಲಕ ರಾಜ್ಯದ ವಿಧಾನಸಭೆ ಇತಿಹಾಸದಲ್ಲೆ ಹೊಸ ಸಂಪ್ರದಾಯಕ್ಕೆ ಮುನ್ನುಡಿ ಬರೆದಿದ್ದಾರೆ.

ವಿಧಾನಸಭೆಯ ನಿವೃತ್ತ ಕಾರ್ಯದರ್ಶಿ ಓಂ ಪ್ರಕಾಶ್ ಅವರನ್ನು ತಮ್ಮ ಸಲಹೆಗಾರರನ್ನಾಗಿ ನೇಮಿಸಿಕೊಂಡಿರುವ ವಿಶ್ವೇಶ್ವರ ಹೆಗಡೆ ಕಾಗೇರಿಯ ಕ್ರಮ ಭಾರಿ ಚರ್ಚೆಗೆ ಕಾರಣವಾಗಿದೆ. ಅಲ್ಲದೇ, ವಿಧಾನಸಭೆ ಸಚಿವಾಲಯದ ಅಧಿಕಾರಿಗಳ ವಲಯದಲ್ಲಿ ಅಸಮಾಧಾನಕ್ಕೂ ಕಾರಣವಾಗಿದೆ ಎಂದು ತಿಳಿದು ಬಂದಿದೆ.

ಈ ಹಿಂದೆ ವಿಧಾನಸಭೆ ಹಾಗೂ ವಿಧಾನಪರಿಷತ್ತಿಗೆ ಮಹಾ ಕಾರ್ಯದರ್ಶಿಯನ್ನಾಗಿ ಓಂ ಪ್ರಕಾಶ್‌ರನ್ನು ನೇಮಕ ಮಾಡುವ ಕುರಿತು ಪ್ರಯತ್ನ ನಡೆದಿತ್ತು. ಇದಕ್ಕೆ ಸಚಿವಾಲಯದ ಸಿಬ್ಬಂದಿಗಳು ಹಾಗೂ ಅಧಿಕಾರಿಗಳು ತೀವ್ರ ವಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಅದನ್ನು ಕೈ ಬಿಡಲಾಗಿತ್ತು.

ನಿವೃತ್ತ ಕಾರ್ಯದರ್ಶಿಯನ್ನು ಸಲಹೆಗಾರರನ್ನಾಗಿ ನೇಮಕ ಮಾಡಿಕೊಳ್ಳುವ ಮೂಲಕ ಹಾಲಿ ಅಧಿಕಾರಿಗಳ ಕಾರ್ಯವೈಖರಿಯನ್ನು ಸ್ಪೀಕರ್ ಪ್ರಶ್ನಿಸಿದಂತಾಗಿದೆ. ಏಕಾಏಕಿ ಸ್ಪೀಕರ್ ಈ ತೀರ್ಮಾನ ಕೈಗೊಂಡಿರುವುದೇಕೆ ಎಂಬುದು ಯಕ್ಷ ಪ್ರಶ್ನೆಯಾಗಿದೆ. ಸ್ಪೀಕರ್ ತಾವಾಗಿಯೇ ಈ ನೇಮಕ ಮಾಡಿದ್ದಾರೆಯೇ? ಅಥವಾ ಆರೆಸೆಸ್ಸ್ ಸೂಚನೆಯಂತೆ ಈ ಕ್ರಮ ಕೈಗೊಂಡಿದ್ದಾರೆಯೇ ಎಂಬುದರ ಕುರಿತು ಚರ್ಚೆ ಆರಂಭವಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News