ಪರಮೇಶ್ವರ್ ಶಿಕ್ಷಣ ಸಂಸ್ಥೆಗಳ ಮೇಲೆ ಐಟಿ ದಾಳಿ ಪ್ರಕರಣ: 55 ನಿಮಿಷದಲ್ಲೇ ಮುಗಿದ ವಿಚಾರಣೆ ?

Update: 2019-10-15 16:25 GMT

ಬೆಂಗಳೂರು, ಅ.15: ಮಾಜಿ ಉಪ ಮುಖ್ಯಮಂತ್ರಿ ಜಿ.ಪರಮೇಶ್ವರ್ ಮನೆ, ಶಿಕ್ಷಣ ಸಂಸ್ಥೆಗಳ ಮೇಲೆ ಐಟಿ ದಾಳಿ ಪ್ರಕರಣ ಸಂಬಂಧ ಮೊದಲ ಬಾರಿಗೆ ಬೆಂಗಳೂರಿನ ಆದಾಯ ತೆರಿಗೆ ಇಲಾಖೆ(ಐಟಿ) ಕಚೇರಿಗೆ ಹಾಜರಾದ ಅವರನ್ನು ಕೇವಲ 55 ನಿಮಿಷಗಳ ಅವಧಿಯಲ್ಲಿಯೇ ವಿಚಾರಣೆ ಅಂತ್ಯಗೊಳಿಸಿದರು ಎನ್ನಲಾಗಿದೆ.

ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಿದ ಹಿನ್ನೆಲೆ ಮಂಗಳವಾರ ಬೆಳಗ್ಗೆ 10 ಗಂಟೆ ಸುಮಾರಿಗೆ ಪರಮೇಶ್ವರ್, ಗುರುತಿನ ಚೀಟಿ, ಮೊದಲಾದ ಪಂಚನಾಮೆಯ ದಾಖಲಾತಿಯೊಂದಿಗೆ ಅಧಿಕಾರಿಗಳ ಮುಂದೆ ಹಾಜರಾದರು. ಬಳಿಕ, 10:55ಕ್ಕೆ ವಿಚಾರಣೆ ಅಂತ್ಯವಾಗಿದೆ ಎಂದು ಹೊರಬಂದರು.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಪರಮೇಶ್ವರ್, ಐಟಿ ವಶಕ್ಕೆ ಪಡೆದಿದ್ದ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದು, ಅವರಿಗೂ ಕಾಲಾವಕಾಶ ಬೇಕಾಗಿದೆ. ಅದಕ್ಕಾಗಿ ನಾನು ಕೂಡ ಮೂರು ದಿನ ಸಮಯ ಕೇಳಿದ್ದೇನೆ. ಮೂರು ದಿನದ ಬಳಿಕ ಸಮನ್ಸ್ ನೀಡಿದರೆ ವಿಚಾರಣೆಗೆ ಹಾಜರಾಗುವುದಾಗಿ ಹೇಳಿದರು.

ತಮ್ಮ ಆಪ್ತ ಸಹಾಯಕ ರಮೇಶ್ ಆತ್ಮಹತ್ಯೆ ಪ್ರಕರಣ ಸಂಬಂಧ ಪ್ರತಿಕ್ರಿಯಿಸಿದ ಅವರು, ಕೆಲವರು ಆತ್ಮಹತ್ಯೆ ಪ್ರಕರಣವನ್ನು ಮುಂದಿಟ್ಟುಕೊಂಡು ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಾರೆ. ಹಾಗಾಗಿ, ಈ ಪ್ರಕರಣದ ಬಗ್ಗೆ ವಿಶೇಷ ತನಿಖೆಯ ಅವಶ್ಯಕತೆ ಇದೆ ಎಂದು ಪರಮೇಶ್ವರ್ ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News