ಬಂಟ್ವಾಳ: ಸಿಡಿಲು ಬಡಿದು ಮನೆಗೆ ಹಾನಿ
Update: 2019-10-15 22:42 IST
ಬಂಟ್ವಾಳ, ಅ. 15: ಬಂಟ್ವಾಳ ತಾಲೂಕಿನ ಅಮ್ಟಾಡಿ ಗ್ರಾಮದ ದೇವಿನಗರ ಎಂಬಲ್ಲಿ ಸುಧಾಕರ ಎಂಬವರ ಮನೆಗೆ ಮಂಗಳವಾರ ಸಂಜೆ ಸಿಡಿಲು ಬಡಿದಿದ್ದು, ಮನೆಯ ವಿದ್ಯುತ್ ಮೀಟರ್ ಸುಟ್ಟುಹೋಗಿದ್ದು, ಮನೆಗೆ ಭಾಗಶಃ ಹಾನಿಯಾಗಿದೆ.
ಮಿಂಚಿಗೆ ಸುಧಾಕರ್ ಅವರು ಮನೆಯಿಂದ ಹೊರಗೆ ಓಡಿ ಹೋಗಿದ್ದು, ಅಪಾಯದಿಂದ ಪಾರಾಗಿದ್ದಾರೆ.