ಮಂಗಳೂರು: ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

Update: 2019-11-04 12:19 GMT

ಮಂಗಳೂರು : ಸುಮಾರು 32 ವರ್ಷಗಳಿಂದ ವಿದ್ಯಾರ್ಥಿ ವೇತನ ನೀಡುತ್ತಿರುವ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಅದ್ ಎಜುಕೇಷನ್ ಆ್ಯಂಡ್  ಚಾರಿಟೇಬಲ್ ಟ್ರಸ್ಟ್ ಈ ಬಾರಿಯೂ ವಿದ್ಯಾರ್ಥಿ ವೇತನಕ್ಕೆ ಅರ್ಜಿಗಳನ್ನು ಆಹ್ವಾನಿಸಿದೆ.

ಪ್ರಥಮ ಪಿಯುಸಿಗಿಂತ ಮೇಲ್ಪಟ್ಟ ಅರ್ಹ ಮುಸ್ಲಿಂ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದ್ದು, ಆಸಕ್ತರು ಟ್ಯಾಲೆಂಟ್ ರಿಸರ್ಚ್ ಫೌಂಡೇಶನ್, ವಿಶ್ವಾಸ್ ಕ್ರೌನ್, ಕೊಚ್ಚಿನ್ ಬೇಕರಿ ಬಳಿ, ಕಂಕನಾಡಿ, ಮಂಗಳೂರು-2 ಇಲ್ಲಿಂದ ಅರ್ಜಿ ಪಡೆದುಕೊಳ್ಳಬಹುದು.

ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ನ. 12 ಕೊನೆಯ ದಿನಾಂಕ. ಮುಸ್ಲಿಂ ಬಡ ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ. 0824-4267883 ಯನ್ನು  ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News