ಪಿಎಂಸಿ ಬ್ಯಾಂಕ್ ಹಗರಣ: ಠೇವಣಿದಾರೆ ಆತ್ಮಹತ್ಯೆ

Update: 2019-10-16 16:19 GMT

ಮುಂಬೈ, ಅ. 16: ಹಗರಣಕ್ಕೆ ತುತ್ತಾಗಿರುವ ಪಂಜಾಬ್ ಹಾಗೂ ಮಹಾರಾಷ್ಟ್ರ ಕೋ-ಆಪರೇಟಿವ್ ಬ್ಯಾಂಕ್‌ನಲ್ಲಿ ಠೇವಣಿ ಇರಿಸಿರುವ ಮಹಿಳೆಯೋರ್ವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ತಮ್ಮ ಹಣ ಹಿಂದೆ ನೀಡುವಂತೆ ಆಗ್ರಹಿಸಿ ಸೋಮವಾರ ನಡೆದ ಗ್ರಾಹಕರ ಪ್ರತಿಭಟನೆಯಲ್ಲಿ ಪಾಲ್ಗೊಂಡು ಹಿಂದಿರುಗಿದ ಡಾ. ನಿವೇದಿತಾ ಬಿಜ್ಲಾನಿ (39) ಆತ್ಮಹತ್ಯೆಗೆ ಶರಣಾಗಿದ್ದಾರೆ. ಅವರು ಪಿಎಂಸಿ ಬ್ಯಾಂಕ್‌ನಲ್ಲಿ 1 ಕೋಟಿ ರೂಪಾಯಿ ಠೇವಣಿ ಇರಿಸಿದ್ದರು.

ವೈದ್ಯಕೀಯ ಸ್ನಾತಕೋತ್ತರ ಪದವಿ ಪಡೆದಿದ್ದ ಬಿಜ್ಲಾನಿ ವೆರ್ಸೋವಾ ಉಪ ನಗರದಲ್ಲಿರುವ ತನ್ನ ನಿವಾಸದಲ್ಲಿ ಸೋಮವಾರ ಸಂಜೆ ನಿದ್ರೆ ಮಾತ್ರೆ ಸೇವಿಸಿ ಆತ್ಮಹತ್ಯೆಗೈದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಇತ್ತೀಚೆಗೆ ಮರು ವಿವಾಹವಾಗಿರುವ ಬಿಜ್ಲಾನಿ ದೀರ್ಘಕಾಲದ ಖಿನ್ನತೆಯಿಂದ ಬಳಲುತ್ತಿದ್ದರು. ಈ ಹಿಂದೆ ಅಮೆರಿಕದಲ್ಲಿದ್ದಾಗ ಕೂಡ ಅವರು ಆತ್ಮಹತ್ಯೆಗೆ ಪ್ರಯತ್ನಿಸಿದ್ದರು ಎಂದು ಅವರು ತಿಳಿಸಿದ್ದಾರೆ.

ಯಾವುದೇ ಸುಸೈಡ್ ನೋಟ್ ಪತ್ತೆಯಾಗಿಲ್ಲ. ತನಿಖೆ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News