ಹೆಬ್ರಿ ಮಿನಿ ವಿಧಾನಸೌಧ ನಿರ್ಮಾಣಕ್ಕೆ ಸ್ಥಳ ಪರಿಶೀಲನೆ

Update: 2019-10-16 16:21 GMT

ಹೆಬ್ರಿ, ಅ.16: ನೂತನವಾಗಿ ಘೋಷಣೆಯಾದ ಹೆಬ್ರಿ ತಾಲೂಕಿಗೆ ಮಿನಿ ವಿಧಾನ ಸೌಧ ಕಟ್ಟಡ ನಿರ್ಮಿಸುವ ಕುರಿತು ಈಗಾಗಲೇ ನಿಗದಿ ಪಡಿಸಲಾದ ಹೆಬ್ರಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಆವರಣದಲ್ಲಿರುವ ಸ್ಥಳವನ್ನು ಕಾರ್ಕಳ ಶಾಸಕ ವಿ.ಸುನಿಲ್ ಕುಮಾರ್ ಇಂದು ಪರಿಶೀಲನೆ ಮಾಡಿದರು.

ಇದೇ ವೇಳೆ ಕಾಲೇಜಿಗೆ ಸಂಬಂಧಿಸಿದ ಜಾಗದಲ್ಲಿ ಮಿನಿ ವಿಧಾನಸೌಧಕ್ಕೆ ವಿರೋಧ ವ್ಯಕ್ತಪಡಿಸಿ ಸ್ಥಳೀಯ ಶ್ರೀಧರ್ ಶೆಟ್ಟಿ ನೇತೃತ್ವದಲ್ಲಿ ವಿದ್ಯಾರ್ಥಿಗಳು ಶಾಸಕರಿಗೆ ಮನವಿ ಸಲ್ಲಿಸಿದರು. ಮುಂದೆ ಕಾಲೇಜಿಗೆ ಸ್ಥಳದ ಅಗತ್ಯ ಬೇಕಾಗಿರುವುದರಿಂದ ಈ ಬಗ್ಗೆ ಪರಿಶೀಲನೆ ಮಾಡಬೇಕೆಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.

ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಹೆಬ್ರಿ ತಹ ಶೀಲ್ದಾರ್ ಮಹೇಶ್ಚಂದ್ರ, ಜಿ.ಪಂ. ಸದಸ್ಯೆ ಜ್ಯೋತಿ ಹರೀಶ್, ತಾ.ಪಂ. ಸದಸ್ಯ ಚಂದ್ರಶೇಖರ ಶೆಟ್ಟಿ, ಹೆಬ್ರಿ ಗ್ರಾ.ಪಂ. ಅಧ್ಯಕ್ಷ ಎಚ್.ಕೆ.ಸುಧಾಕರ, ತಾಲೂಕು ಹೋರಾಟ ಸಮಿತಿಯ ಅಧ್ಯಕ್ಷ ಎಚ್.ಭಾಸ್ಕರ್ ಜೋಯಿಸ್ ಮೊದಲಾದವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News