ಶೋಭಾ ವಿರುದ್ಧದ ಮಾನನಷ್ಟ ಮೊಕದ್ದಮೆ ವಿಚಾರಣೆಗೆ ಹೈಕೋರ್ಟ್ ಮಧ್ಯಂತರ ತಡೆ

Update: 2019-10-16 16:41 GMT

ಬೆಂಗಳೂರು, ಅ.16: ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ವಿರುದ್ಧ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ(ಪಿಎಫ್‌ಐ) ದಾಖಲಿಸಿರುವ ಮಾನನಷ್ಟ ಮೊಕದ್ದಮೆ ವಿಚಾರಣೆಗೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ.

ಶೋಭಾ ಕರಂದ್ಲಾಜೆ ಸಲ್ಲಿಸಿದ್ದ ಅರ್ಜಿ ವಿಚಾರಣೆ ನ್ಯಾಯಮೂರ್ತಿ ಪಿ.ಬಿ.ಭಜಂತ್ರಿ ಅವರಿದ್ದ ಏಕಸದಸ್ಯ ನ್ಯಾಯಪೀಠದಲ್ಲಿ ನಡೆಯಿತು. ಪ್ರತಿವಾದಿ ಪಿಎಫ್‌ಐ ಸಂಘಟನೆಗೆ ನೋಟಿಸ್ ಜಾರಿಗೊಳಿಸಲು ನ್ಯಾಯಪೀಠವು ಆದೇಶಿಸಿದೆ.

ಏನಿದು ಪ್ರಕರಣ: ಐಎಂಎ (ಐ ಮಾನಿಟರಿ ಅಡ್ವೈಸರಿ) ಬಹುಕೋಟಿ ವಂಚನೆ ಪ್ರಕರಣದಲ್ಲಿ ಕಂಪೆನಿಯ ಮುಖ್ಯಸ್ಥ ಮನ್ಸೂರ್ ಖಾನ್ ಹಣವನ್ನು, ಪಿಎಫ್‌ಐ (ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ) ಸಂಘಟನೆಗೆ ಉಪಯೋಗಿಸುತ್ತಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದ ಅಂಶಗಳ ಬಗ್ಗೆ ತನಿಖೆಯಾಗಬೇಕು ಎಂದು ಶೋಭಾ ಕರಂದ್ಲಾಜೆ ಪತ್ರಿಕಾಗೋಷ್ಠಿಯಲ್ಲಿ ಒತ್ತಾಯಿಸಿದ್ದರು ಎಂದು ಅವರ ವಿರುದ್ಧ ಪಿಎಫ್‌ಐ ಮಾನನಷ್ಟ ಮೊಕದ್ದಮೆ ಹೂಡಿದೆ. ಈ ಪ್ರಕರಣದಲ್ಲಿ ಹಾಜರಾಗದೇ ಇದ್ದ ಕಾರಣ ಶೋಭಾ ವಿರುದ್ಧ ಜನಪ್ರತಿನಿಧಿಗಳ ನ್ಯಾಯಾಲಯ ವಾರಂಟ್ ಜಾರಿ ಮಾಡಿತ್ತು. ಕಳೆದ ವಾರವಷ್ಟೇ ನ್ಯಾಯಾಲಯಕ್ಕೆ ಹಾಜರಾಗಿ ವಾರಂಟ್ ರಿಕಾಲ್ ಮಾಡಿಸಿಕೊಂಡಿದ್ದರು. ಈ ವೇಳೆ ಜನಪ್ರತಿನಿಧಿಗಳ ನ್ಯಾಯಾಲಯದ ನ್ಯಾಯಾಧೀಶ ರಾಮಚಂದ್ರ ಡಿ.ಹುದ್ದಾರ ಅವರು, ಶೋಭಾ ಅವರಿಗೆ 200 ರೂ. ದಂಡ ವಿಧಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News