ನಿಷೇಧಿತ ಪ್ಲಾಸ್ಟಿಕ್ ವಸ್ತುಗಳ ಬಳಕೆ: ದಂಡ

Update: 2019-10-16 16:48 GMT

ಮಂಗಳೂರು, ಅ.16: ನಗರದ ವಿವಿಧೆಡೆ ದಾಳಿ ನಡೆಸಿದ ಮಂಗಳೂರು ಮಹಾನಗರ ಪಾಲಿಕೆ ಅಧಿಕಾರಿಗಳು ಸುಮಾರು 30 ಕೆಜಿ ನಿಷೇಧಿತ ಪ್ಲಾಸ್ಟಿಕ್ ವಸ್ತುಗಳನ್ನು ವಶಪಡಿಸಿಕೊಂಡು ದಂಡ ವಿಧಿಸಿದ್ದಾರೆ.

ಮಂಗಳೂರು ಮಹಾನಗರ ವ್ಯಾಪ್ತಿಯಲ್ಲಿ ನಿಷೇಧಿತ ಪ್ಲಾಸ್ಟಿಕ್ ವಸ್ತುಗಳ ತಯಾರಿಕೆ, ಸರಬರಾಜು ಮತ್ತು ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಿ ಆದೇಶ ಹೊರಡಿಸಿದ್ದರೂ, ಹಲವು ಉದ್ದಿಮೆದಾರರು, ವ್ಯಾಪಾರಸ್ಥರು, ನಿಷೇಧಿಸಿರುವ ಪ್ಲಾಸ್ಟಿಕ್ ವಸ್ತುಗಳ ಮಾರಾಟ ಮಾಡುತ್ತಿರುವುದು ಹಾಗೂ ಗ್ರಾಹಕರಿಗೆ ಪ್ಲಾಸ್ಟಿಕ್ ಚೀಲದಲ್ಲಿ ಸಾಮಗ್ರಿ ವಿತರಿಸುತ್ತಿರುವುದು ಕಂಡು ಬಂದ ಹಿನ್ನೆಲೆ ದಾಳಿ ನಡೆಸಲಾಗಿದೆ.

ಮಹಾನಗರ ಪಾಲಿಕೆ ಅಧಿಕಾರಿಗಳು ನಗರದ ಕೇಂದ್ರ ಸೆಂಟ್ರಲ್ ಮಾರುಕಟ್ಟೆ, ಗಣಪತಿ ಶಾಲೆ ರಸ್ತೆ, ಭವಂತಿ ಸ್ಟ್ರೀಟ್ ಮುಂತಾದ ಸ್ಥಳಗಳಲ್ಲಿರುವ ಸುಮಾರು 20ಕ್ಕಿಂತ ಹೆಚ್ಚು ಉದ್ದಿಮೆಗಳಿಗೆ ದಾಳಿ ನಡೆಸಿ ಸುಮಾರು 30 ಕೆಜಿ ನಿಷೇಧಿತ ಪ್ಲಾಸ್ಟಿಕ್ ವಸ್ತುಗಳನ್ನು ವಶಪಡಿಸಿ ಕೊಂಡು 9,500 ರೂ. ದಂಡ ವಿಧಿಸಿದ್ದಾರೆ.

ಆರೋಗ್ಯ ವಿಭಾಗದ ಪರಿಸರ ಅಭಿಯಂತರ ಶಬರಿನಾಥ್ ರೈ, ಆರೋಗ್ಯ ನಿರೀಕ್ಷಕರಾದ ಕರುಣಾಕರ್, ಭರತ್‌ಕುಮಾರ್, ಯಶವಂತ್‌ ಕುಮಾರ್, ರಕ್ಷಿತಾ ಮತ್ತಿತರರು ದಾಳಿಯಲ್ಲಿ ಭಾಗವಹಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News