ಅ.18: ಮಂಗಳೂರಿಗೆ ಸಿದ್ದರಾಮಯ್ಯ

Update: 2019-10-16 16:51 GMT

ಮಂಗಳೂರು, ಅ.16: ಕಾಂಗ್ರೆಸ್ ಕಾರ್ಯಕರ್ತರ ಸಭೆಯನ್ನು ಅ.18ರಂದು ಬೆಳಗ್ಗೆ 10 ಗಂಟೆಗೆ ನಗರದ ಬೆಂದೂರ್‌ವೆಲ್ ಸಂತ ಸೆಬಾಸ್ಟಿಯನ್ ಹಾಲ್‌ನಲ್ಲಿ ಹಮ್ಮಿಕೊಳ್ಳಲಾಗಿದ್ದು, ಮಾಜಿ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಭಾಗವಹಿಸಲಿದ್ದಾರೆ.

ಅಲ್ಲದೆ, ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕಾಂಗ್ರೆಸ್ ಕಾರ್ಯಕರ್ತರನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್‌ಕುಮಾರ್ ಅಧ್ಯಕ್ಷತೆಯಲ್ಲಿ ನಡೆಯಲಿದೆ.

ಸಭೆಯಲ್ಲಿ ಮಾಜಿ ಉಸ್ತುವಾರಿ ಸಚಿವರಾದ ಬಿ.ರಮಾನಾಥ ರೈ, ಯು.ಟಿ. ಖಾದರ್, ವಿಧಾನ ಪರಿಷತ್ ಸದಸ್ಯರಾದ ಐವನ್ ಡಿಸೋಜ, ಮಾಜಿ ಶಾಸಕರಾದ ವಸಂತ ಬಂಗೇರ, ಅಭಯಚಂದ್ರ ಜೈನ್, ಮೊಯ್ದಿನ್ ಬಾವ, ಶಕುಂತಲಾ ಶೆಟ್ಟಿ, ಜೆ.ಆರ್. ಲೋಬೊ ಹಾಗೂ ಮಿಥುನ್ ರೈ ಮತ್ತಿತರರು ಭಾಗವಹಿಸಲಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಕಚೇರಿ ಕಾರ್ಯದರ್ಶಿ ನಝೀರ್ ಬಜಾಲ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News