ಅ.18: ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ

Update: 2019-10-16 17:04 GMT

ಮಂಗಳೂರು, ಅ.16: ದ.ಕ. ಜಿಲ್ಲಾಡಳಿತ, ಜಿಪಂ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸೇರಿದಂತೆ ಮತ್ತಿತರ ಸಂಘಟನೆಗಳ ಸಹಯೋಗದಲ್ಲಿ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ಕಾರ್ಯಕ್ರಮವನ್ನು ಅ.18ರಂದು ಬೆಳಗ್ಗೆ 9:30ಕ್ಕೆ ನಗರದ ಸರಕಾರಿ ಶಿಕ್ಷಕ ಶಿಕ್ಷಣ ಮಹಾವಿದ್ಯಾಲಯದಲ್ಲಿ ಹಮ್ಮಿಕೊಳ್ಳಲಾಗಿದೆ.

ಜಿಲ್ಲಾ ಮಂಗಳೂರು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಮತ್ತು ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಕಡ್ಲೂರು ಸತ್ಯ ನಾರಾಯಣಾಚಾರ್ಯ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News