ಬೆಂವಿವಿ ಕುಲಪತಿ ರದ್ದು ಆದೇಶಕ್ಕೆ ತಡೆಯಾಜ್ಞೆ ಮುಂದುವರಿಸಿದ ಹೈಕೋರ್ಟ್

Update: 2019-10-16 17:25 GMT

ಬೆಂಗಳೂರು, ಸೆ.25: ಬೆಂಗಳೂರು ವಿಶ್ವವಿದ್ಯಾಲಯ ಕುಲಪತಿ ಕೆ.ಆರ್.ವೇಣುಗೋಪಾಲ್ ನೇಮಕಾತಿಯನ್ನು ರದ್ದುಗೊಳಿಸಿ ಏಕಸದಸ್ಯ ನ್ಯಾಯಪೀಠ ಹೊರಡಿಸಿದ್ದ ಆದೇಶಕ್ಕೆ ಹೈಕೋರ್ಟ್ ವಿಭಾಗೀಯ ನ್ಯಾಯಪೀಠವು ಅ.25ರವರೆಗೂ ಮಧ್ಯಂತರ ತಡೆಯಾಜ್ಞೆಯನ್ನು ವಿಸ್ತರಿಸಿ ಆದೇಶಿಸಿದೆ.

ಏಕಸದಸ್ಯ ನ್ಯಾಯಪೀಠದ ಆದೇಶ ಪ್ರಶ್ನಿಸಿ ಕೆ.ಆರ್.ವೇಣುಗೋಪಾಲ್, ಬೆಂವಿವಿ ಸಲ್ಲಿಸಿದ್ದ ಪ್ರತ್ಯೇಕ ಮೇಲ್ಮನವಿ ಅರ್ಜಿ ವಿಚಾರಣೆ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕಾ ಮತ್ತು ನ್ಯಾಯಮೂರ್ತಿ ಎಸ್.ಆರ್.ಕೃಷ್ಣಕುಮಾರ್ ಅವರಿದ್ದ ವಿಭಾಗೀಯ ನ್ಯಾಯಪೀಠದಲ್ಲಿ ನಡೆಯಿತು. ಅರ್ಜಿದಾರರ ಪರ ವಾದಿಸಿದ ವಕೀಲರು, ಬೆಂವಿವಿ ಕುಲಪತಿ ಕೆ.ಆರ್.ವೇಣುಗೋಪಾಲ್ ಅವರ ನೇಮಕಾತಿಯನ್ನು ಹೈಕೋರ್ಟ್ ಏಕಸದಸ್ಯ ನ್ಯಾಯಪೀಠವು ರದ್ದುಗೊಳಿಸಿ ಹೊರಡಿಸಿರುವ ಆದೇಶಕ್ಕೆ ನೀಡಿರುವ ತಡೆಯಾಜ್ಞೆಯನ್ನು ಮುಂದುವರಿಸಬೇಕೆಂದು ಪೀಠಕ್ಕೆ ಮನವಿ ಮಾಡಿದರು. ವಕೀಲರ ವಾದ ಆಲಿಸಿದ ನ್ಯಾಯಪೀಠವು ತಡೆಯಾಜ್ಞೆಯನ್ನು ಅ.25ವರೆಗೂ ವಿಸ್ತರಿಸಿ ಆದೇಶ ಹೊರಡಿಸಿತು.

ಧಾರವಾಡದ ಡಾ.ಸಂಗಮೇಶ್ ಪಾಟೀಲ್ ಎಂಬುವವರು ಬೆಂವಿವಿ ಕುಲಪತಿ ವೇಣುಗೋಪಾಲ್ ಅವರ ವಿರುದ್ಧ ಹಲವು ಅಕ್ರಮಗಳ ಆರೋಪಗಳಿವೆ. ಈ ಹಿನ್ನೆಲೆಯಲ್ಲಿ ಇವರ ನೇಮಕಾತಿಯನ್ನು ರದ್ದುಪಡಿಸಬೇಕೆಂದು ಅರ್ಜಿ ಸಲ್ಲಿಸಿದ್ದರು. ಏಕಸದಸ್ಯ ನ್ಯಾಯಪೀಠವು ಸೆ.24ರಂದು ವೇಣುಗೋಪಾಲ್ ನೇಮಕಾತಿಯನ್ನು ರದ್ದುಗೊಳಿಸಿ ಆದೇಶ ಹೊರಡಿಸಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News