ವಿಜಯಪುರ: ಸರಣಿ ಅಪಘಾತಕ್ಕೆ ಇಬ್ಬರು ಬಲಿ

Update: 2019-10-17 03:51 GMT

ವಿಜಯಪುರ: ಲಾರಿಯೊಂದಕ್ಕೆ ಹಿಂದಿನಿಂದ ಬಂದ ಟಿಪ್ಪರ್ ಢಿಕ್ಕಿ ಹೊಡೆದಿದ್ದು, ಅದರ ಹಿಂದಿನಿಂದ ಬರುತ್ತಿದ್ದ ಕಾರು ಟಿಪ್ಪರ್ ಗೆ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟು, ಟಿಪ್ಪರ್ ಚಾಲಕ ಸೇರಿ ಮೂವರು ಗಾಯಗೊಂಡ ಘಟನೆ ಕೋಲಾರ ಪಟ್ಟಣದ ಸೇತುವೆ ಬಳಿ ಇಂದು ಬೆಳಗ್ಗೆ ನಡೆದಿದೆ.

ಮೃತರ ಗುರುತು ಪತ್ತೆಯಾಗಿಲ್ಲ. ಗಾಯಾಳುಗಳನ್ನು ವಿಜಯಪುರ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನಾ ಸ್ಥಳಕ್ಕೆ ಕೋಲಾರ ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದು, ಈ ಬಗ್ಗೆ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News