ಅ.19: ಬಜ್ಪೆ ನೂತನ ಪ್ರಾಥಮಿಕ ಆರೋಗ್ಯ ಕೇಂದ್ರ ಉದ್ಘಾಟನೆ

Update: 2019-10-17 15:14 GMT

ಮಂಗಳೂರು, ಅ.17: ದ.ಕ. ಜಿಲ್ಲಾಡಳಿತ, ಜಿಪಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಆರೋಗ್ಯ ಮತು ಕುಟುಂಬ ಕಲ್ಯಾಣ ಗಳ ಸಂಯುಕ್ತ ಆಶ್ರಯದಲ್ಲಿ ಬಜ್ಪೆ ಪ್ರಾಥಮಿಕ ಆರೋಗ್ಯ ಕೇಂದ್ರದ ನೂತನ ಕಟ್ಟಡದ ಉದ್ಘಾಟನೆ ಕಾರ್ಯಕ್ರಮವು ಅ.19ರಂದು ಬೆಳಗ್ಗೆ 10:30ಕ್ಕೆ ಬಜ್ಪೆಯಲ್ಲಿ ನಡೆಯಲಿದೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಬಿ.ರಾಮುಲು ಕಟ್ಟಡದ ಉದ್ಘಾಟನೆ ನೆರವೇರಿಸಲಿದ್ದಾರೆ. ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ದೀಪ ಪ್ರಜ್ವಲಿಸಲಿದ್ದಾರೆ. ಮೂಡುಬಿದಿರೆ ಶಾಸಕ ಉಮಾನಾಥ್ ಎ. ಕೋಟ್ಯಾನ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News