ಜಸ್ಟಿಸ್ ಬೋಬ್ಡೆಯವರನ್ನು ತನ್ನ ಉತ್ತರಾಧಿಕಾರಿಯಾಗಿ ಶಿಫಾರಸು ಮಾಡಿದ ಮುಖ್ಯ ನ್ಯಾಯಮೂರ್ತಿ ಗೊಗೊಯ್

Update: 2019-10-18 06:28 GMT

ಹೊಸದಿಲ್ಲಿ,ಅ.18: ಜಸ್ಟಿಸ್ ಶರದ್ ಅರವಿಂದ್ ಬೋಬ್ಡೆ ಅವರನ್ನು ತನ್ನ ಉತ್ತರಾಧಿಕಾರಿಯಾಗಿ ನೇಮಿಸುವಂತೆ ಭಾರತದ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ಕೇಂದ್ರ ಸರಕಾರಕ್ಕೆ ಶಿಫಾರಸು ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಜಸ್ಟಿಸ್ ಎಸ್‌ಎ ಬೋಬ್ಡೆ ಅವರನ್ನು ಮುಂದಿನ ಭಾರತದ ಮುಖ್ಯ ನ್ಯಾಯಮೂರ್ತಿಯನ್ನಾಗಿ ನೇಮಿಸುವ ಪ್ರಕ್ರಿಯೆಯನ್ನು ಆರಂಭಿಸಲು ಸರಕಾರಕ್ಕೆ ಜಸ್ಟಿಸ್ ಗೊಗೊಯ್ ತನ್ನ ಪತ್ರದಲ್ಲಿ ಶಿಫಾರಸು ಮಾಡಿದ್ದಾರೆ.

ಜಸ್ಟಿಸ್ ಗೊಗೊಯ್ ಬಳಿಕ ಹಿರಿತನದ ಆಧಾರದಲ್ಲಿ ಜಸ್ಟಿಸ್ ಬೋಬ್ಡೆ ಎರಡನೇ ಸ್ಥಾನದಲ್ಲಿದ್ದಾರೆ.

 ಜಸ್ಟಿಸ್ ಬೋಬ್ಡೆ ಮಧ್ಯಪ್ರದೇಶ ಹೈಕೋರ್ಟ್‌ನ ಮಾಜಿ ಮುಖ್ಯ ನ್ಯಾಯಾಧೀಶರಾಗಿದ್ದು, 2021ರ ಎಪ್ರಿಲ್ 23ರಂದು ನಿವೃತ್ತಿಯಾಗಲಿದ್ದಾರೆ.

ಮಹಾರಾಷ್ಟ್ರದ ನಾಗ್ಪುರದಲ್ಲಿ ಎ.24ರಂದು ಜನಿಸಿರುವ ಜಸ್ಟಿಸ್ ಬೋಬ್ಡೆ ನಾಗ್ಪುರ ವಿಶ್ವವಿದ್ಯಾಲಯದಲ್ಲಿ ಅಭ್ಯಾಸ ಮಾಡಿದ್ದರು. 2000ರಲ್ಲಿ ಹೆಚ್ಚುವರಿ ನ್ಯಾಯಾಧೀಶರಾಗಿ ಬಾಂಬೆ ಹೈಕೋರ್ಟ್‌ಗೆ ಸೇರ್ಪಡೆಯಾಗಿದ್ದರು. 2012ರಲ್ಲಿ ಮಧ್ಯಪ್ರದೇಶದ ಮುಖ್ಯ ನ್ಯಾಯಾಧೀಶರಾಗಿ ನೇಮಕಗೊಂಡಿದ್ದರು. 2013ರ ಎಪ್ರಿಲ್‌ನಲ್ಲಿ ಸುಪ್ರೀಂಕೋರ್ಟ್‌ಗೆ ಪದೋನ್ನತಿ ಪಡೆದಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News