ಪ್ರತ್ಯೇಕ ರಾಜ್ಯ ರಚನೆಯಾಗಲಿ: ಬಿಜೆಪಿ ಶಾಸಕ ಉಮೇಶ್ ಕತ್ತಿ

Update: 2019-10-18 12:50 GMT

ಬೆಳಗಾವಿ, ಅ.18: ಉತ್ತರ ಕರ್ನಾಟಕ ಭಾಗದ 13 ಜಿಲ್ಲೆಗಳು ಹಾಗೂ ಅದಕ್ಕೆ ಹೊಂದಿಕೊಂಡಿರುವ ದಕ್ಷಿಣ ಮಹಾರಾಷ್ಟ್ರದ ಮೂರು ಜಿಲ್ಲೆಗಳನ್ನು ಸೇರಿಸಿ ಪ್ರತ್ಯೇಕ ರಾಜ್ಯ ರಚಿಸಬೇಕು ಎಂದು ಬಿಜೆಪಿ ಶಾಸಕ ಉಮೇಶ್ ಕತ್ತಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಶುಕ್ರವಾರ ಜಿಲ್ಲೆಯ ಸಂಕೇಶ್ವರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಉತ್ತರ ಕರ್ನಾಟಕದ 13 ಜಿಲ್ಲೆಗಳ ಜೊತೆಗೆ ಮಹಾರಾಷ್ಟ್ರದ ಕೊಲ್ಹಾಪುರ, ಸೊಲ್ಲಾಪುರ ಹಾಗೂ ಸಾಂಗ್ಲಿ ಜಿಲ್ಲೆಗಳನ್ನು ಸೇರಿಸಿಕೊಂಡು ಪ್ರತ್ಯೇಕ ರಾಜ್ಯ ರಚಿಸಿದರೆ ಈ ಭಾಗದ ಅಭಿವೃದಿ ಸಾಧ್ಯವಾಗಲಿದೆ ಎಂದು ಹೇಳಿದರು.

ಕರ್ನಾಟಕ, ಮಹಾರಾಷ್ಟ್ರ ಹಾಗೂ ಗೋವಾ ರಾಜ್ಯದಲ್ಲಿ ಬಿಜೆಪಿ ಸರಕಾರವಿದೆ. ಇದರ ಜೊತೆ ಕೇಂದ್ರದಲ್ಲಿಯೂ ಸರಕಾರವಿದೆ. ಈ ಅವಕಾಶವನ್ನು ಬಳಸಿಕೊಂಡು ತಕ್ಷಣ ಮಹದಾಯಿ ಜಲ ವಿವಾದದ ಬಿಕ್ಕಟ್ಟು ಬಗೆಹರಿಸಲು ಕ್ರಮಕೈಗೊಳ್ಳಬೇಕು ಎಂದು ಉಮೇಶ್ ಕತ್ತಿ ಮನವಿ ಮಾಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News