ಉಡುಪಿ ಜಿಲ್ಲಾ ಮಟ್ಟದ ಪಿಯು ವಿದ್ಯಾರ್ಥಿಗಳ ಕ್ರೀಡಾಕೂಟ: ಮಿಲಾಗ್ರಿಸ್, ಬಾಲಕಿಯರ ಸರಕಾರಿ ಕಾಲೇಜಿಗೆ ಸಮಗ್ರ ಪ್ರಶಸ್ತಿ

Update: 2019-10-18 14:31 GMT

ಕುಂದಾಪುರ, ಅ.18: ಉಡುಪಿ ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ಕೋಡಿ ಹಾಜಿ ಕೆ.ಮೊಹಿದ್ದೀನ್ ಬ್ಯಾರಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಜಂಟಿ ಆಶ್ರಯದಲ್ಲಿ ಕುಂದಾಪುರದ ಗಾಂಧಿ ಮೈದಾನದಲ್ಲಿ ಆಯೋಜಿಸಲಾದ ಉಡುಪಿ ಜಿಲ್ಲಾ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ಜಿಲ್ಲಾ ಮಟ್ಟದ ಎರಡು ದಿನಗಳ ಕ್ರೀಡಾಕೂಟ ‘ಸೌಹಾರ್ದ -2019’ರ ಬಾಲಕರ ವಿಭಾಗದಲ್ಲಿ ಕಲ್ಯಾಣಪುರ ಮಿಲಾಗ್ರಿಸ್ ಪದವಿ ಪೂರ್ವ ಕಾಲೇಜು ಹಾಗೂ ಬಾಲಕಿಯರ ವಿಭಾಗದಲ್ಲಿ ಉಡುಪಿ ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜು ಸಮಗ್ರ ಪ್ರಶಸ್ತಿ ಗೆದ್ದುಕೊಂಡಿವೆ.

ವೈಯಕ್ತಿಕ ಚಾಂಪಿಯನ್ ಪ್ರಶಸ್ತಿಯನ್ನು ಬಾಲಕರ ವಿಭಾಗದಲ್ಲಿ ಕೋಟ ವಿವೇಕ ಪದವಿ ಪೂರ್ವ ಕಾಲೇಜಿನ ಅಖಿಲೇಶ್, ಬಾಲಕಿಯರ ವಿಭಾಗದಲ್ಲಿ ಉಡುಪಿಯ ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜಿನ ರಕ್ಷಿತಾ ಮತ್ತು ಕಲ್ಯಾಣಪುರ ಮಿಲಾಗ್ರಿಸ್ ಪದವಿ ಪೂರ್ವ ಕಾಲೇಜಿನ ಕೀರ್ತನಾ ಪಡೆದು ಕೊಂಡಿದ್ದಾರೆ. ಗುರುವಾರ ನಡೆದ ಸಮಾರೋಪ ಸಮಾರಂಭದಲ್ಲಿ ವಿಜೇತರಿಗೆ ಬಹುಮಾನಗಳನ್ನು ವಿತರಿಸಲಾಯಿತು.

ಅಧ್ಯಕ್ಷತೆ ವಹಿಸಿದ್ದ ಕೋಡಿ ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಕೆ.ಎಂ. ಅಬ್ದುಲ್ ರೆಹಮಾನ್ ಬ್ಯಾರಿ, ಮೀನು ಮಾರಾಟ ಫೆಡರೇಶನ್ ಅಧ್ಯಕ್ಷ ಯಶ್‌ಪಾಲ್ ಸುವರ್ಣ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹರಿಪ್ರಸಾದ್ ಶೆಟ್ಟಿ ಧ್ವಜಾ ಅವರೋಹಣವನ್ನು ನೆರವೇರಿಸಿದರು.

ಮುಖ್ಯ ಅತಿಥಿಗಳಾಗಿ ಕಾಂಗ್ರೆಸ್ ಮುಖಂಡ ಮಲ್ಯಾಡಿ ಶಿವರಾಮ ಶೆಟ್ಟಿ, ಲೆಕ್ಕ ಪರಿಶೋಧಕ ಗಣೇಶ ಶೆಟ್ಟಿ ಮೊಳಹಳ್ಳಿ, ಕೋಡಿ ನುಸ್ರತುಲ್ ಮಸಾಕಿನ್ ಅಸೋಸಿಯೇಶನ್ ಅಧ್ಯಕ್ಷ ಶೇಕ್ ಅಬುಮೊಹಮ್ಮದ್, ಕುಂದಾಪುರ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಶಶಿಧರ ಹೆಮ್ಮಾಡಿ, ಉಡುಪಿ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಮಾರುತಿ, ಕ್ರೀಡಾ ಮೇಲ್ವಿಚಾರಕ ದಿನೇಶ ಕುಮಾರ್, ಜಿಲ್ಲಾ ಪ್ರಾಂಶುಪಾಲರ ಸಂಘದ ಅಧ್ಯಕ್ಷ ಮಾಧವ ಭಟ್, ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಯ ನಿರ್ದೇಶಕ ದೋಮ ಚಂದ್ರಶೇಖರ್, ಪ್ರಾಂಶುಪಾಲರುಗಳಾದ ಡಾ.ಶಮೀರ್, ಸಿದ್ದಪ್ಪಕೆ.ಎಸ್., ಫಿರದೋಸ್, ತಾಲೂಕು ಪದವಿ ಪೂರ್ವ ಕ್ರೀಡಾ ಸಂಯೋಜಕ ನಾಗರಾಜ್ ಶೆಟ್ಟಿ, ಸಾಮಾಜಿಕ ಕಾರ್ಯಕರ್ತ ಮಂಜು ಬಿಲ್ಲವ, ಕೆ.ಆರ್.ನಾಯ್ಕ, ಮುಖ್ಯೋ ಪಾಧ್ಯಾಯಿನಿ ಜಯಂತಿ, ಅಧ್ಯಾಪಕಿ ದುರ್ಗಿ ಪಟೆಗಾರ್, ಸುಮಿತ್ರ, ಶಂಕರ್ ಪೂಜಾರಿ, ಅಬ್ದುಲ್ಲಾ ಕೆ., ವರ್ಗೀಸ್ ಮೊದಲಾದವರು ಉಪಸ್ಥಿತರಿದ್ದರು.

ಸುರೇಂದ್ರ ಶೆಟ್ಟಿ ಸ್ವಾಗತಿಸಿದರು. ಹಾಜಿ ಕೆ.ಮೊಹಿದ್ದೀನ ಬ್ಯಾರಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ ದೈಹಿಕ ಶಿಕ್ಷಣ ಶಿಕ್ಷಕ ಇಲಿಯಾಸ್ ವಂದಿಸಿದರು. ಅರ್ಜಿತಾ ಮತ್ತು ಮಮತಾ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News