ಟಿಕೆಟ್ ರಹಿತ ಪ್ರಯಾಣ: 9.57 ಲಕ್ಷ ರೂ. ದಂಡ ವಸೂಲಿ

Update: 2019-10-18 17:59 GMT

ಬೆಂಗಳೂರು, ಅ. 18: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ(ಬಿಎಂಟಿಸಿ) ಬಸ್‌ಗಳನ್ನು ಟಿಕೆಟ್ ರಹಿತ ಪ್ರಯಾಣ ಮಾಡುತ್ತಿದ್ದ ಪ್ರಯಾಣಿಕರಿಂದ 9.57 ಲಕ್ಷ ರೂ.ದಂಡ ವಸೂಲಿ ಮಾಡಲಾಗಿದೆ ಎಂದು ಸಂಸ್ಥೆ ತಿಳಿಸಿದೆ.

ಸೆಪ್ಟಂಬರ್ ತಿಂಗಳಲ್ಲಿ 18 ಸಾವಿರ ಟ್ರಿಪ್‌ಗಳನ್ನು ತಪಾಸಣೆ ನಡೆಸಿದ್ದು 5,073 ಮಂದಿ ಟಿಕೆಟ್ ರಹಿತ ಪ್ರಯಾಣಿಕರನ್ನು ಪತ್ತೆ ಮಾಡಿ ಅವರಿಂದ ಒಟ್ಟು 9,57,970 ರೂ.ದಂಡದ ರೂಪದಲ್ಲಿ ವಸೂಲಿ ಮಾಡಲಾಗಿದೆ. ಅಲ್ಲದೆ, ನಿರ್ವಾಹಕರ ವಿರುದ್ಧ 2812 ಪ್ರಕರಣಗಳನ್ನು ದಾಖಲಿಸಲಾಗಿದೆ.

ಮಹಿಳೆಯರಿಗೆ ಮೀಸಲಿಟ್ಟ ಆಸನಗಳಲ್ಲಿ ಕುಳಿತು ಪ್ರಯಾಣಿಸುತ್ತಿದ್ದ 203 ಮಂದಿ ಪುರುಷ ಪ್ರಯಾಣಿಕರಿಂದ ಒಟ್ಟು 20,300 ರೂ. ದಂಡವನ್ನು ವಸೂಲಿ ಮಾಡಲಾಗಿದೆ. ಪ್ರಯಾಣಿಕರು ಬಿಎಂಟಿಸಿ ಬಸ್‌ಗಳಲ್ಲಿ ಪ್ರಯಾಣಿಸುವ ವೇಳೆ ಅಧಿಕೃಕ ಟಿಕೆಟ್, ದಿನದ ಅಥವಾ ಮಾಸಿಕ ಪಾಸ್ ಪಡೆದು ಪಯಾಣಿಸಲು ಪ್ರಕಟಣೆ ಕೋರಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News