ಸುಳ್ಯ : ಬಸ್ ಢಿಕ್ಕಿ ; ಶಿಕ್ಷಕಿ ಸ್ಥಳದಲ್ಲೇ ಮೃತ್ಯು

Update: 2019-10-19 11:51 GMT

 ಸುಳ್ಯ, ಅ.19. ಪಾದಚಾರಿ ಶಿಕ್ಷಕಿಯೋರ್ವರಿಗೆ ಬಸ್ ಢಿಕ್ಕಿ ಹೊಡೆದ ಪರಿಣಾಮ ಮಹಿಳೆ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಸುಳ್ಯದಲ್ಲಿ ಶನಿವಾರ ನಡೆದಿದೆ.

ಮೃತ ಮಹಿಳೆಯನ್ನು ಸುಳ್ಯದ ಶಾಲಾ ಶಿಕ್ಷಕಿ ಮೀನಾಕ್ಷಿ ಎಂದು ಗುರುತಿಸಲಾಗಿದೆ.

 ಮೀನಾಕ್ಷಿ ಅವರು ಸುಳ್ಯದ ಹಳೇಗೇಟು ಸಮೀಪದ ವಿದ್ಯಾನಗರ ಎಂಬಲ್ಲಿ ರಸ್ತೆ ದಾಟುತ್ತಿದ್ದ ವೇಳೆ ವೇಗವಾಗ ಬಂದ ಬಸ್ಸೊಂದು ಢಿಕ್ಕಿ ಹೊಡೆದುದರಿಂದ ಈ ದುರ್ಘಟನೆ ಸಂಭವಿಸಿದೆ.

ಸ್ಥಳಕ್ಕೆ ಸುಳ್ಯ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಬಸ್ ಚಾಲಕನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ‌.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News