ಎಸೆಸೆಲ್ಸಿ ತಾತ್ಕಾಲಿಕ ಪರೀಕ್ಷಾ ವೇಳಾಪಟ್ಟಿ ಪ್ರಕಟ

Update: 2019-10-19 15:47 GMT

ಬೆಂಗಳೂರು, ಅ.19: ಪ್ರಸಕ್ತ ಶೈಕ್ಷಣಿಕ ವರ್ಷದ ಎಸೆಸೆಲ್ಸಿ ಪರೀಕ್ಷೆಗಳು ಮುಂದಿನ ವರ್ಷದ ಮಾ.20 ರಿಂದ ಎ.3 ರವರೆಗೂ ನಡೆಯಲಿದ್ದು, ಈ ಸಂಬಂಧ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ತಾತ್ಕಾಲಿಕ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ.

ಸದರಿ ವೇಳಾಪಟ್ಟಿಗೆ ಅಭ್ಯರ್ಥಿಗಳು ಆಕ್ಷೇಪಣೆ ಸಲ್ಲಿಸಲು ಅ.21 ರಿಂದ ನ.19 ರವರೆಗೂ ಕಾಲಾವಕಾಶವಿದೆ. ಆಕ್ಷೇಪಣೆಗಳಿದ್ದಲ್ಲಿ ನಿರ್ದೇಶಕರು (ಪರೀಕ್ಷೆಗಳು) ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ, 6ನೇ ಅಡ್ಡರಸ್ತೆ, ಮಲ್ಲೇಶ್ವರಂ, ಬೆಂಗಳೂರು - 560 003 ಇವರಿಗೆ ನೇರವಾಗಿ ಅಂಚೆ ಮೂಲಕ ಸಲ್ಲಿಸಬಹುದಾಗಿದೆ.

ಪರೀಕ್ಷಾ ವಿವರ:

ಮಾ.20: ಪ್ರಥಮ ಭಾಷೆ- ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲೀಷ್, ಸಂಸ್ಕೃತ

ಮಾ.23: ಸಮಾಜ ವಿಜ್ಞಾನ

ಮಾ.26: ವಿಜ್ಞಾನ, ರಾಜ್ಯಶಾಸ್ತ್ರ, ಕರ್ನಾಟಕ ಸಂಗೀತ/ಹಿಂದೂಸ್ತಾನಿ ಸಂಗೀತ

ಮಾ.30: ಗಣಿತ, ಸಮಾಜಶಾಸ್ತ್ರ

ಎ.1: ದ್ವಿತೀಯ ಭಾಷೆ- ಇಂಗ್ಲಿಷ್, ಕನ್ನಡ

ಎ.3: ತೃತೀಯ ಭಾಷೆ- ಹಿಂದಿ, ಕನ್ನಡ, ಇಂಗ್ಲಿಷ್, ಅರೇಬಿಕ್, ಪರ್ಷಿಯನ್, ಉರ್ದು, ಸಂಸ್ಕೃತ, ಕೊಂಕಣಿ, ತುಳು

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News