ಹೊಯ್ಸಳ, ಕೆಳದಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಆಹ್ವಾನ

Update: 2019-10-19 14:44 GMT

ಉಡುಪಿ, ಅ.19: ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಪ್ರಶಸ್ತಿ ಯೋಜನೆಯಡಿ 2019-20ನೇ ಸಾಲಿನಲ್ಲಿ ಜಿಲ್ಲಾ ಮಟ್ಟದಲ್ಲಿ ಯಾವುದೇ ಕ್ಷೇತ್ರದಲ್ಲಿ- ಆವಿಷ್ಕಾರ (ಇನ್ನೊವೇಷನ್), ತಾರ್ಕಿಕ (ಸ್ಕೊಲೇಟಿಕ್) ಸಾಧನೆಗಳು, ಕ್ರೀಡೆ, ಸಾಂಸ್ಕೃತಿಕ, ಕಲೆ, ಸಂಗೀತ ಕ್ಷೇತ್ರಗಳಲ್ಲಿ- ಅಸಾಧಾರಣ ಸಾಧನೆ ಮಾಡಿದ ಮಕ್ಕಳಿಗೆ ಪ್ರಶಸ್ತಿಗಳನ್ನು ನೀಡಲಾಗುತ್ತದೆ.

ಪ್ರತಿ ಪ್ರತಿಭಾ ಕ್ಷೇತ್ರದಿಂದ ಇಬ್ಬರಂತೆ ಒಟ್ಟು 8 ಮಕ್ಕಳನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗುತ್ತದೆ. ಆಯ್ಕೆಯಾದ ಪ್ರತಿ ಮಗುವಿಗೆ ತಲಾ 10 ಸಾವಿರ ರೂ. ನಗದು ಬಹುಮಾನ ಹಾಗೂ ಪ್ರಶಸ್ತಿ ಪತ್ರ ನೀಡಲಾಗುವುದು. ಮಕ್ಕಳ ವಯಸ್ಸು 5ರಿಂದ 18 ವರ್ಷದೊಳಗಿರಬೇಕು. ಈ ಹಿಂದಿನ ವರ್ಷಗಳಲ್ಲಿ ಜಿಲ್ಲಾ ಮಟ್ಟದಲ್ಲಿ ಪ್ರಶಸ್ತಿ ಪಡೆದ ಮಕ್ಕಳಿಗೆ ಮತ್ತೆ ಅವಕಾಶವಿಲ್ಲ.

ಪ್ರಶಸ್ತಿಗೆ ಆಯ್ಕೆಯಾಗುವ ಮಕ್ಕಳು ಅಪ್ರತಿಮ ಪ್ರತಿಭೆಯುಳ್ಳವರಾಗಿದ್ದು, ಸಾಧನೆ ಅಸಾಧಾರಣವೆಂದು ಸಮರ್ಥಿಸಲು ಪೂರಕ ದಾಖಲೆಗಳನ್ನು ಒದಗಿಸ ಬೇಕು. ಸೂಕ್ತ ದಾಖಲೆಗಳೊಂದಿಗೆ ಜಿಲ್ಲಾ ಉಪನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ರಜತಾದ್ರಿ, ಮಣಿಪಾಲ ಇಲ್ಲಿಗೆ ಅ.31 ರೊಳಗೆ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕರ ಕಚೇರಿ (ದೂರವಾಣಿ: 0820-2574978)ಯನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿುವಂತೆ ಇಲಾಖೆಯ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News