ಉಡುಪಿ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಹುದ್ದೆಗೆ ಅರ್ಜಿ ಆಹ್ವಾನ

Update: 2019-10-19 14:45 GMT

ಉಡುಪಿ, ಅ.19: ಉಡುಪಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕದಲ್ಲಿ ಖಾಲಿ ಇರುವ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಯ ಒಂದು ಹುದ್ದೆಯನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಅಭ್ಯರ್ಥಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ನಿವೃತ್ತ ರಾಗಿರುವ ಪತ್ರಾಂಕಿತ ಅಧಿಕಾರಿಗಳಾಗಿರಬೇಕು ಮತ್ತು ಸಂಸ್ಥೆಗಳಲ್ಲಿ ಕನಿಷ್ಟ 2 ವರ್ಷ ಅಥವಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ/ಡಿಸಿಪಿಒ ಆಗಿ ಕನಿಷ್ಟ 1 ವರ್ಷ ಸೇವೆ ಸಲ್ಲಿಸಿದ ಅನುಭವವಿರ ಬೇಕು. ಗುತ್ತಿಗೆ ನೇಮಕಾತಿ ಸಿಬ್ಬಂದಿಗಳ ಸೇವಾವಧಿ ಗರಿಷ್ಟ ವಯೋಮಿತಿ 65 ವರ್ಷಗಳಾಗಿದೆ. ಅರ್ಜಿ ಯನ್ನು ಅ.21ರಿಂದ ಕಚೇರಿಯಲ್ಲಿ ಪಡೆಯಬಹುದು.

ಭರ್ತಿ ಮಾಡಿದ ಅರ್ಜಿಗಳನ್ನು ಅ.29ರೊಳಗೆ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ರಜತಾದ್ರಿ, ಮಣಿಪಾಲ ಇವರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ದೂ.ಸಂ: 0820-2574964ನ್ನು ಸಂಪರ್ಕಿಸುವಂತೆ ಜಿಲ್ಲಾ ಸಮಗ್ರ ಮಕ್ಕಳ ರಕ್ಷಣಾ ಘಟಕದ ಮಕ್ಕಳ ರಕ್ಷಣಾಧಿಕಾರಿ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News