ತೆಂಕನಿಡಿಯೂರು: ಸ್ಪರ್ಧಾತ್ಮಕ ಪರೀಕ್ಷೆಗೆ ತರಬೇತಿ

Update: 2019-10-19 14:49 GMT

ಉಡುಪಿ, ಅ.19: ತೆಂಕನಿಡಿಯೂರಿನ ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಇದರ ಉದ್ಯೋಗ ಮಾಹಿತಿ ಘಟಕ ಮತ್ತು ಐಕ್ಯೂಎಸಿ ಘಟಕಗಳ ಸಂಯುಕ್ತ ಆಶ್ರಯದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸುವ ಕುರಿತು ತರಬೇತಿ ಕಾರ್ಯಕ್ರಮ ನಡೆಯಿತು.

ಉಡುಪಿ ಕರಾವಳಿ ಕಾವಲು ಪಡೆಯ ಎಸ್ಪಿ ಚೇತನ್ ಆರ್., ಐಎಎಸ್ ಪರೀಕ್ಷೆಯ ಸ್ವರೂಪದ ಬಗ್ಗೆ ತಿಳಿಸುತ್ತಾ, ಪೂರ್ವಭಾವಿ ಪರೀಕ್ಷೆ, ಮುಖ್ಯ ಪರೀಕ್ಷೆ, ಸಂದರ್ಶನ ಎನ್ನುವ 3 ಹಂತಗಳಲ್ಲಿ ಇರುತ್ತದೆ. ಇದಕ್ಕಾಗಿ ವಿದ್ಯಾರ್ಥಿಗಳು ನಿರಂತರವಾಗಿ ಓದುತ್ತಾ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಭಾಗವಹಿಸುತ್ತಾ ಅನುಭವವನ್ನು ಪಡೆದುಕೊಳ್ಳಬೇಕು ಎಂದರು.

ಪ್ರಾಂಶುಪಾಲ ಪ್ರೊ. ಬಾಲಕೃಷ್ಣ ಎಸ್. ಹೆಗ್ಡೆ ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ಐಕ್ಯೂಎಸಿ ಸಂಚಾಲಕ ಡಾ. ಸುರೇಶ್ ರೈ ಕೆ., ಅರ್ಥಶಾಸ್ತ್ರ ವಿಬಾಗದ ಮುಖ್ಯಸ್ಥ ಮತ್ತು ಸ್ನಾತಕೋತ್ತರ ವಿಭಾಗದ ಡೀನ್ ಡಾ. ಗೋಪಾಲಕೃಷ್ಣ ಎಂ. ಗಾಂವ್ಕರ್ ಉಪಸ್ಥಿತರಿದ್ದರು.

ಉದ್ಯೋಗ ಮಾಹಿತಿ ಘಟಕದ ಸ್ನಾತಕೋತ್ತರ ವಿಭಾಗದ ಸಂಚಾಲಕ ಡಾ. ಎಚ್.ಕೆ. ವೆಂಕಟೇಶ್ ಪ್ರಾಸ್ತಾವಿಕ ಮಾತುಗಳನ್ನಾಡಿ ಸ್ವಾಗತಿಸಿ ದರು. ಇಂಗ್ಲೀಷ್ ಸ್ನಾತಕೋತ್ತರ ವಿಬಾಗದ ಸಹಾಯಕ ಪ್ರಾಧ್ಯಾಪಕಿ ಶರ್ಮಿಳಾ ಹಾರಾಡಿ ಕಾರ್ಯಕ್ರಮ ನಿರೂಪಿಸಿದರು. ಉದ್ಯೋಗ ಮಾಹಿತಿ ಘಟಕದ ಪದವಿ ವಿಭಾಗದ ಸಂಚಾಲಕ ಉಮೇಶ್ ಪೈ ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News