ಚಿಟ್ಟಾಣಿ ಸಂಸ್ಮರಣಾ ಯಕ್ಷಗಾನ ಸಪ್ತಾಹ ಉದ್ಘಾಟನೆ

Update: 2019-10-19 15:53 GMT

ಉಡುಪಿ, ಅ.19: ಪರ್ಯಾಯ ಪಲಿಮಾರು ಮಠದ ಆಶ್ರಯದಲ್ಲಿ ಶ್ರೀವೀರಾಂಜನೇಯ ಯಕ್ಷಮಿತ್ರ ಮಂಡಳಿ ಬಂಗಾರಮಕ್ಕಿ ಹಾಗೂ ಅತಿಥಿ ಕಲಾವಿದರ ಸಹಯೋಗದಲ್ಲಿ ಉಡುಪಿಯ ಚಿಟ್ಟಾಣಿ ಅಭಿಮಾನಿ ಬಳಗ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಆಯೋಜಿಸಿರುವ ‘ಚಿಟ್ಟಾಣಿ ಸಂಸ್ಮರಣಾ ಯಕ್ಷಗಾನ ಸಪ್ತಾಹ-2019’ ಶನಿವಾರ ಸಂಜೆ ಉದ್ಘಾಟನೆಗೊಂಡಿತು.

ಪರ್ಯಾಯ ಪಲಿಮಾರು ಮಠಾಧೀಶರಾದ ಶ್ರೀವಿದ್ಯಾಧೀಶ ತೀರ್ಥ ಶ್ರೀಪಾದರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಚಿಟ್ಟಾಣಿ ಸಪ್ತಾಹಕ್ಕೆ ಶುಭ ಹಾರೈಸಿದರು.

ಪಲಿಮಾರು ಮಠದ ಕಿರಿಯ ಯತಿ ಶ್ರೀವಿದ್ಯಾರಾಜೇಶ್ವರತೀರ್ಥ ಶ್ರೀಪಾದರು,ಪ್ರಯಾಗದ ಶ್ರೀವಿದ್ಯಾತ್ಮತೀರ್ಥ ಶ್ರೀಪಾದರು, ವಿಜಯಕುಮಾರ್ ಮುದ್ರಾಡಿ, ಚಿಟ್ಟಾಣಿ ಅಭಿಮಾನಿ ಬಳಗದ ಅಧ್ಯಕ್ಷ ತಲ್ಲೂರು ಶಿವರಾಮ ಶೆಟ್ಟಿ, ಕಾರ್ಯದರ್ಶಿ ಎಂ.ಗೋಪಿಕೃಷ್ಣ ರಾವ್, ಗಂಗಾಧರ ರಾವ್ ಉಪಸ್ಥಿತರಿದ್ದರು.

ಪಲಿಮಾರು ಮಠದ ಕಿರಿಯ ಯತಿ ಶ್ರೀವಿದ್ಯಾರಾಜೇಶ್ವರತೀರ್ಥ ಶ್ರೀಪಾದರು,ಪ್ರಯಾಗದ ಶ್ರೀವಿದ್ಯಾತ್ಮತೀರ್ಥ ಶ್ರೀಪಾದರು, ವಿಜಯಕುಮಾರ್ ಮುದ್ರಾಡಿ, ಚಿಟ್ಟಾಣಿ ಅಭಿಮಾನಿ ಬಳಗದ ಅ್ಯಕ್ಷತಲ್ಲೂರುಶಿವರಾಮಶೆಟ್ಟಿ,ಕಾರ್ಯದರ್ಶಿಎಂ.ಗೋಪಿಕೃಷ್ಣರಾವ್,ಗಂಗಾರ ರಾವ್ ಉಪಸ್ಥಿತರಿದ್ದರು. ಯಕ್ಷಗಾನ ಕಲಾರಂಗದ ನಾರಾಯಣ ಎಂ. ಹೆಗಡೆ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಸಭಾ ಕಾರ್ಯಕ್ರಮದ ಬಳಿಕ ಕೊಂಡದಕುಳಿ ರಾಮಚಂದ್ರ ಹೆಗಡೆ, ಸುಬ್ರಹ್ಮಣ್ಯ ಚಿಟ್ಟಾಣಿ, ನೀಲ್ಕೋಡು ಶಂಕರ ಹೆಗಡೆ ಮುಂತಾದ ಕಲಾವಿದರಿಂದ ‘ಅರ್ಜುನಾಂಜನೇಯ-ಶನೀಶ್ವರಾಂಜನೇಯ’ ಯಕ್ಷಗಾನ ಪ್ರದರ್ಶನಗೊಂಡಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News