ಆಗುಂಬೆ ಘಾಟಿ: ಲಘು-ಭಾರೀ ವಾಹನ ಸಂಚಾರಕ್ಕೆ ಮುಕ್ತ

Update: 2019-10-19 15:58 GMT

ಉಡುಪಿ, ಅ.19: ರಾಷ್ಟ್ರೀಯ ಹೆದ್ದಾರಿ ಆಗುಂಬೆ ಘಾಟಿಯನ್ನು ಇದೀಗ ಲಘು ಹಾಗೂ ಭಾರೀ ವಾಹನಗಳ ಸಂಚಾರಕ್ಕೆ ಮುಕ್ತಗೊಳಿಸಲಾಗಿದೆ.

ಈ ವರ್ಷದ ಮಳೆಗಾಲದ ಪ್ರಾರಂಭದಲ್ಲಿ ಬಿದ್ದ ಭಾರೀ ಮಳೆಯಿಂದ ಕೆಲವು ತಿರುವುಗಳಲ್ಲಿ ಗುಡ್ಡ ಕುಸಿದು, ದುರಸ್ತಿಗಾಗಿ ಎಲ್ಲಾ ರೀತಿಯ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿತ್ತು. ದುರಸ್ತಿ ಕಾರ್ಯ ಮುಗಿದ ಬಳಿಕ ಸಾರ್ವಜನಿಕರ ಹಿತದೃಷ್ಟಿಯಿಂದ ಸುಗಮ ಸಂಚಾರಕ್ಕಾಗಿ ಲಘು ವಾಹನಗಳಾದ ಮಿನಿಬಸ್‌ಗಳು, ಜೀಪು, ವ್ಯಾನ್, ಕಾರುಗಳು ಹಾಗೂ ದ್ವಿಚಕ್ರ ವಾಹನ ಗಳೊಂದಿಗೆ ಎಲ್‌ಸಿವಿ ವಾಹನಗಳ ಸಂಚಾರಕ್ಕೆ ಮಾತ್ರ ಮುಕ್ತಗೊಳಿಸಿ ಭಾರೀ ವಾಹನಗಳ ಸಂಚಾರವನ್ನು ನಿಷೇಧಿಸಿ ಆದೇಶ ಹೊರಡಿಸಲಾಗಿತ್ತು.

ಇದೀಗ ಈ ರಸ್ತೆಯಲ್ಲಿ ಯಾವುದೇ ಗುಡ್ಡ ಕುಸಿತವಾಗಲಿ, ಮರಗಳು ಉರುಳಿ ಸಂಚಾರಕ್ಕೆ ಅಡ್ಡಿಯಾಗುವ ಸಂಭವ ಇಲ್ಲವಾದ್ದರಿಂದ, ರಾಷ್ಟ್ರೀಯ ಹೆದ್ದಾರಿ 169 ಎಯ ಆಗುಂಬೆ ಘಾಟಿಯಲ್ಲಿ ಲಘು ವಾಹನಗಳು ಹಾಗೂ ಭಾರಿ ವಾಹನಗಳ ಸಂಚಾರವನ್ನು ಸಂಪೂರ್ಣ ನಿಷೇಧಿಸಿ, ಮಾ.30ರಂದು ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಜಿ. ಜಗದೀಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News