ರಾಜ್ಯ ಮಟ್ಟದ ಪದವಿ ಪೂರ್ವ ಕಾಲೇಜುಗಳ ಬಾಲ್‍ಬ್ಯಾಡ್ಮಿಂಟನ್: ಆಳ್ವಾಸ್ ತಂಡಗಳಿಗೆ ಪ್ರಶಸ್ತಿ

Update: 2019-10-20 12:37 GMT

ಮೂಡುಬಿದಿರೆ: ಕಲಬುರ್ಗಿಯಲ್ಲಿ ಬುದ್ಧ ವಿಹಾರ ಕ್ರೀಡಾಂಗಣದಲ್ಲಿ ನಡೆದ ರಾಜ್ಯ ಮಟ್ಟದ ಪದವಿ ಪೂರ್ವ ಕಾಲೇಜುಗಳ ಬಾಲ್ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಆಳ್ವಾಸ್ ಶಿಕ್ಷಣ ಸಂಸ್ಥೆಯ ಬಾಲಕ ಮತ್ತು ಬಾಲಕಿಯರ ತಂಡಗಳು ಸತತ 15ನೇ ಬಾರಿ ಪ್ರಶಸ್ತಿ ಗೆದ್ದಿದೆ. 

ಆಳ್ವಾಸ್‍ನ ಕ್ರೀಡಾಪಟುಗಳು ಆಂಧ್ರಪ್ರದೇಶದಲ್ಲಿ ನಡೆಯುವ ರಾಷ್ಟ್ರೀಯ ಪದವಿ ಪೂರ್ವ ಕಾಲೇಜುಗಳ ಚಾಂಪಿಯನ್‍ಷಿಪ್‍ಗೆ ಅರ್ಹತೆಯನ್ನೂ ಗಳಿಸಿದ್ದಾರೆ. ಟೂರ್ನಿಯಲ್ಲಿ ಆಳ್ವಾಸ್ ತಂಡದವರು ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿದ್ದರು. 

ಶನಿವಾರ ನಡೆದ ಬಾಲಕರ ವಿಭಾಗದ ಫೈನಲ್‍ನಲ್ಲಿ ಆಳ್ವಾಸ್ 35-18, 35-19 ನೇರ ಸೆಟ್‍ಗಳಿಂದ ಕೊಡಗು ಜಿಲ್ಲೆಯನ್ನು ಪ್ರತಿನಿಧಿಸಿದ್ದ ಕನ್ನಡ ಭಾರತಿ ಪದವಿ ಪೂರ್ವ ಕಾಲೇಜು (ಕುಶಾಲನಗರ) ತಂಡವನ್ನು ಮಣಿಸಿತು. ಬಾಲಕಿಯರ ವಿಭಾಗದ ಅಂತಿಮ ಘಟ್ಟದ ಪಂದ್ಯದಲ್ಲಿ ಆಳ್ವಾಸ್ ತಂಡ 35-22, 35-15 ನೇರ ಸೆಟ್‍ಗಳಿಂದ ಉಡುಪಿ ಜಿಲ್ಲೆಯನ್ನು ಪ್ರತಿನಿಧಿಸಿದ್ದ ಕಾರ್ಕಳ ಭುವನೇಂದ್ರ ಪದವಿ ಪೂರ್ವ ಕಾಲೇಜು ತಂಡವನ್ನು ಸೋಲಿಸಿ ಪ್ರಶಸ್ತಿಯನ್ನು ಪಡೆಯಿತು. 

ವಿಜೇತ ತಂಡಗಳನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ ಮೋಹನ ಆಳ್ವ ಅಭಿನಂದಿಸಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News