ಭಟ್ಕಳ: ಗ್ಲೋಬಲ್ ಅಂಜುಮನ್ ಅಲುಮ್ನಿ ಹಳೆ ವಿದ್ಯಾರ್ಥಿಗಳ ಸಮಾವೇಶ

Update: 2019-10-20 16:56 GMT

ಭಟ್ಕಳ: ಇಲ್ಲಿನ ಪ್ರತಿಷ್ಟಿತ ಅಂಜುಮನ್ ಹಾಮಿಯೆ ಮುಸ್ಲಿಮೀನ್ ಶಿಕ್ಷಣ ಸಂಸ್ಥೆಯ ಶತಮಾನೋತ್ಸವ ಸಮಾರಂಭದ ಅಂಗವಾಗಿ ಅ.19 ಮತ್ತು 20 ರಂದು ಗ್ಲೋಬಲ್ ಅಂಜುಮನ್ ಅಲುಮ್ನಿ  ಹಳೆ ವಿದ್ಯಾರ್ಥಿಗಳ ಸಮಾವೇಶವು ಅಂಜುಮನ್ ಇಂಜಿನೀಯರಿಂಗ್ ಸಭಾಭವನದಲ್ಲಿ ಜರಗಿತು. 

ಸಮಾವೇಶದಲ್ಲಿ ಜಗತ್ತಿನಾದ್ಯಂತ ವಿವಿಧ ದೇಶಗಳಲ್ಲಿ ಉನ್ನತ ಹುದ್ದೆ ಹಾಗೂ ಪ್ರತಿಷ್ಟಿತ ಕಂಪನಿಗಳಲ್ಲಿ ಉನ್ನತ ಸ್ಥಾನದಲ್ಲಿರುವ ಅಂಜುಮನ್ ಸಂಸ್ಥೆಯ ಹಳೆಯ ವಿದ್ಯಾರ್ಥಿಗಳು ಭಾಗವಹಿಸಿದ್ದರು. 

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಅಧ್ಯಕ್ಷ ಅಬ್ದುಲ್ ರಹೀಮ್ ಜುಕಾಕೋ ವಹಿಸಿದ್ದರು. ಪ್ರಧಾನ ಕಾರ್ಯದರ್ಶಿ ಇಸ್ಮಾಯಿಲ್ ಸಿದ್ದೀಕ್, ಹೆಚ್ಚುವರಿ ಪ್ರಧಾನ ಕಾರ್ಯದರ್ಶಿ ಇಸ್ಹಾಕ್ ಶಾಬಂದ್ರಿ, ಪ್ರಾಂಶುಪಾಲ ಮುಷ್ತಾಖ್ ಆಹ್ಮದ್ ಭಾವಿಕಟ್ಟಿ, ಉಪ ಪ್ರಾಂಶುಪಾಲ ಫಲಚಂದ್ರ ಮತ್ತಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News