ಕೊಳಗೇರಿ ನಿವಾಸಿಗಳ ಎತ್ತಂಗಡಿಗೆ ಖಂಡನೆ

Update: 2019-10-20 17:00 GMT

ಬೆಂಗಳೂರು, ಅ. 20: ಜಿಲ್ಲಾಧಿಕಾರಿಗಳ ಆದೇಶವನ್ನು ಉಲ್ಲಂಘಿಸಿ ರಾಜರಾಜೇಶ್ವರಿ ನಗರ ಕ್ಷೇತ್ರ ವ್ಯಾಪ್ತಿಯ ಜೆ.ಪಿ.ಪಾರ್ಕ್ ಕೊಳಚೆ ಪ್ರದೇಶದಲ್ಲಿದ್ದ 140 ಕುಟುಂಬಗಳನ್ನು ಏಕಾಏಕಿ ಎತ್ತಂಗಡಿ ಮಾಡಿ ಬೀದಿಪಾಲು ಮಾಡಿರುವ ಕ್ರಮವನ್ನು ಬಿಡುಗಡೆ ಚಿರತೆಗಳು ಸಂಘಟನೆ ಖಂಡಿಸಿದೆ.

ಹಲವು ವರ್ಷಗಳಿಂದ ಜೆ.ಪಿ.ಪಾರ್ಕ್ ಕೊಳಚೆ ಪ್ರದೇಶದಲ್ಲಿ ವಾಸ ಮಾಡುತ್ತಿದ್ದ ನಿವಾಸಿಗಳ ಜೆಪಿ ಪಾರ್ಕ್‌ನಲ್ಲಿ ಕೂಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದಾರೆ. ಅವರಿಗೆ ಮತದಾರರ ಗುರುತಿಚೀಟಿ, ಪಡಿತರ ಚೀಟಿ, ಆಧಾರ್ ಕಾರ್ಡ್ ಹೊಂದಿದ್ದಾರೆ. ಅವರಿಗೆ ಸೂಕ್ತ ವಸತಿ ಸೌಲಭ್ಯ ಕಲ್ಪಿಸುವುದು ಸರಕಾರದ ಜವಾಬ್ದಾರಿ ಎಂದು ರಾಜ್ಯ ಪ್ರಧಾನ ಕಾರ್ಯದರ್ಶಿ ವಿ.ಮೂರ್ತಿ ಆಗ್ರಹಿಸಿದ್ದಾರೆ.

ಕೊಳಗೇರಿ ನಿವಾಸಿಗಳಿಗೆ ಅದೇ ಜಾಗದಲ್ಲಿ ವಾಸಿಸಲು ಅವಕಾಶ ಕಲ್ಪಿಸಬೇಕು. ಒಂದು ವೇಳೆ ಆ ಜಾಗದಲ್ಲಿ ಸಾಧ್ಯವಾಗದಿದ್ದರೆ ಅವರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಿ, ಸೂಕ್ತ ಮೂಲಸೌಲಭ್ಯ ಕಲ್ಪಿಸಬೇಕು. ಇಲ್ಲವಾದರೆ ಹೋರಾಟ ಅನಿವಾರ್ಯ ಎಂದು ಅವರು ಪ್ರಕಟಣೆಯಲ್ಲಿ ಎಚ್ಚರಿಕೆ ನೀಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News