'ಕಲ್ಯಾಣ ಕರ್ನಾಟಕದ ನಿರ್ಲಕ್ಷ್ಯ ಖಂಡಿಸಿ ನ.1ರಂದು ಪ್ರತ್ಯೇಕ ಧ್ವಜಾರೋಹಣ’

Update: 2019-10-20 17:03 GMT
ಸಾಂದರ್ಭಿಕ ಚಿತ್ರ

ಕಲಬುರಗಿ, ಅ.20: ರಾಜ್ಯ ಸರಕಾರ ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಗೆ ನಿರ್ಲಕ್ಷ್ಯ ವಹಿಸಿರುವುದನ್ನು ಖಂಡಿಸಿ, ನವೆಂಬರ್ 1ರಂದು ಪ್ರತ್ಯೇಕ ಧ್ವಜಾರೋಹಣ ನೆರವೇರಿಸುವುದಾಗಿ ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟ ಸಮಿತಿ ತಿಳಿಸಿದೆ.

ರವಿವಾರ ಕಲಬುರಗಿ ನಗರದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಸಮಿತಿ ಸಂಸ್ಥಾಪಕ ಎಂ.ಎಸ್.ಪಾಟೀಲ್ ನರಿಬೋಳ, ರಾಜ್ಯದಲ್ಲಿ ಯಾವುದೇ ಸರಕಾರ ಅಸ್ತಿತ್ವಕ್ಕೆ ಬಂದರೂ ಕಲ್ಯಾಣ ಕರ್ನಾಟಕ ಭಾಗವನ್ನು ಸಂಪೂರ್ಣ ನಿರ್ಲಕ್ಷಿಸಲಾಗುತ್ತಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರಕಾರದಲ್ಲಿ ಸಹ ಕಲ್ಯಾಣ ಕರ್ನಾಟಕ ಭಾಗಕ್ಕೆ ಕೇವಲ ಒಂದು ಸಚಿವ ಸ್ಥಾನ ನೀಡುವ ಮೂಲಕ ಮಲತಾಯಿ ಧೋರಣೆ ಅನುಸರಿಸಲಾಗಿದೆ ಎಂದು ದೂರಿದರು.

ಮುಂಬೈ ಕರ್ನಾಟಕ ಭಾಗದ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರನ್ನು ಕೆಕೆಆರ್‌ಡಿಬಿ ಅಧ್ಯಕ್ಷರಾನ್ನಾಗಿ ಮಾಡಲು ಮುಂದಾಗಿರುವುದು ಖಂಡನಾರ್ಹ. ಈ ಸ್ಥಾನಕ್ಕೆ ಕಲ್ಯಾಣ ಕರ್ನಾಟಕ ಭಾಗದವರನ್ನೆ ನೇಮಕ ಮಾಡಬೇಕು. ಇಲ್ಲದಿದ್ದರೆ ಹೋರಾಟ ನಡೆಸಲಾಗುವುದೆಂದು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News