ಬಿಜೆಪಿಯವರಿಗೆ ಸಾಮಾಜಿಕ ನ್ಯಾಯದ ಮೇಲೆ ನಂಬಿಕೆ ಇಲ್ಲ: ಮಾಜಿ ಸಿಎಂ ಸಿದ್ದರಾಮಯ್ಯ

Update: 2019-10-20 17:25 GMT

ಮೈಸೂರು,ಅ.20: ಬಿಜೆಪಿಯವರಿಗೆ ಸಾಮಾಜಿಕ ನ್ಯಾಯದ ಮೇಲೆ ನಂಬಿಕೆ ಇಲ್ಲ. ಹಾಗಾಗಿ ಜಾತಿ ಗಣತಿ ಜಾರಿಗೆ ತರಲು ಹಿಂದೇಟು ಹಾಕುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅರೋಪಿಸಿದರು.

ಗಾಂಧಿ ವಿಚಾರ ಪರಿಷತ್ ಸಭೆಗೆ ಹೋಗುವ ಮುನ್ನ ರವಿವಾರ ತಮ್ಮ ನಿವಾಸದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷರಾಗಿದ್ದ ಕಾಂತರಾಜು ಅವರು ಜಾತಿ ಗಣತಿ ಸಮೀಕ್ಷೆಯ ವರದಿಯನ್ನು ಸರಕಾರಕ್ಕೆ ನೀಡಿದ್ದಾರೆ. ಅದನ್ನು ಜಾರಿ ಮಾಡಲು ಬಿಜೆಪಿ ಸರಕಾರ ಹಿಂದೇಟು ಹಾಕುತ್ತಿದೆ. ಇವರಿಗೆ ಸಾಮಾಜಿಕ ನ್ಯಾಯದ ಬಗ್ಗೆ ಇಚ್ಛಾ ಶಕ್ತಿ ಇಲ್ಲ. ಅಲ್ಪ ಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್ನರನ್ನು ಹತ್ತಿರಕ್ಕೆ ಸೇರಿಸುವುದಿಲ್ಲ. ಇನ್ನು ದಲಿತರು ಮತ್ತು ಹಿಂದುಳಿದವರ ಅಭಿವೃದ್ಧಿ ಬೇಕಾಗಿಲ್ಲ. ಅದಕ್ಕಾಗಿಯೇ ಇವರು ಜಾತಿ ಗಣತಿ ಜಾರಿ ಮಾಡುತ್ತಿಲ್ಲ ಎಂದು ಹೇಳಿದರು.

ನಾನು ಮುಖ್ಯಮಂತ್ರಿಯಾಗಿದ್ದಾಗ ವಿಶೇಷ ಕಾಳಜಿ ವಹಿಸಿ ಜಾತಿ ಗಣತಿ ಸಮೀಕ್ಷೆ ಮಾಡಿಸಿದೆ. ಸ್ವಾತಂತ್ರ್ಯ ಬಂದು 72 ವರ್ಷ ಕಳೆದರೂ ಯಾವ ಜಾತಿಯವರು ಆರ್ಥಿಕವಾಗಿ, ಸಾಮಾಜಿಕವಾಗಿ ಮುಂದುವರೆದಿದ್ದಾರೆ ಎಂಬ ಮಾಹಿತಿ ಇಲ್ಲ. ಅದಕ್ಕಾಗಿ ಜಾತಿ ಗಣತಿ ಸಮೀಕ್ಷೆ ಮಾಡಿಸಲಾಯಿತು. ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷರಾಗಿದ್ದ ಕಾಂತರಾಜು ಅವರು ರಾಜ್ಯ ಮುಖ್ಯ ಕಾರ್ಯದರ್ಶಿ ಅವರಿಗೆ ವರದಿಯನ್ನು ನೀಡಿದ್ದಾರೆ. ಅದನ್ನು ಜಾರಿಗೆ ಮಾಡಬೇಕು ಅಷ್ಟೇ ಎಂದು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News